ಪಡುಬಿದ್ರಿ: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವು!
Twitter
Facebook
LinkedIn
WhatsApp
ಪಡುಬಿದ್ರೆ ನವೆಂಬರ್ 03: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಲ್ಪಟ್ಟು ಬೈಕ್ ಸವಾರನ ಮೇಲೆ ಟ್ಯಾಂಕರ್ ಲಾರಿ ಹರಿದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ ನಡೆದಿದೆ.
ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುವ ಬಸ್ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸದ ವೇಳೆ ಪ್ರಜ್ವಲ್ ಬಸ್ ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.
ಈ ಪರಿಣಾಮ ಪ್ರಜ್ವಲ್ ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದು ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.