ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ ;ಮೂವರ ಬಂಧನ..!

Twitter
Facebook
LinkedIn
WhatsApp
ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣ ;ಮೂವರ ಬಂಧನ..!

ವಿಧಾನಸೌಧದ (Vidhana Soudha) ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ಈಗ ದೆಹಲಿ ಮೂಲದ ಇಲ್ತಾಜ್, ಆರ್‌.ಟಿ. ನಗರ ಮೂಲದ ಮುನಾವರ್ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮದ್ ಶಫಿ ನಾಶಿಪುಡಿ ಅವರನ್ನು ಬಂಧಿಸಿದ್ದಾರೆ. ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಪಾಕಿಸ್ತಾನ ಪರ ಘೋಷಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್ ಸ್ಯಾಂಪಲ್ಸ್ಗಳನ್ನ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್ಗಳನ್ನ ಸಂಗ್ರಹಿಸಲಾಗಿದ್ದು, ಎಫ್ಎಸ್ಎಲ್ ತಂಡ ಪರಿಶೀಲನೆ ಮಾಡಿದೆ. ಘಟನೆ ನಡೆದ ದೃಶ್ಯಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿತ್ತು.

ಸರ್ಕಾರ ಕೂಡ ಕಟ್ಟುನಿಟ್ಟಿನ ತನಿಖೆಗೆ ಮುಂದಾಗಿದ್ದು, ಎಫ್ಎಸ್ಎಲ್ ಮೇಲೆ ಇಡೀ ಪ್ರಕರಣವೇ ನಿಂತಿದೆ. ಸರ್ಕಾರ ಇನ್ನು ಎಫ್ಎಸ್ಎಲ್ ವರದಿ ಬಂದಿಲ್ಲ ಅಂತಿದ್ದರೆ, ಇತ್ತ ಬಿಜೆಪಿ ನಾಯಕರು ಮಾತ್ರ ನಿನ್ನೆಯೇ ವರದಿ ಬಂದಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಎಫ್ಎಸ್ಎಲ್ ವರದಿ ಕಾಂಗ್ರೆಸ್ ಕೈ ಸೇರಿದೆ. ಆದರೆ ಬಿಡುಗಡೆ ಮಾಡುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.

ಎಫ್​ಎಸ್​ಎಲ್ ವರದಿ ಬಿಡುಗಡೆ ಬಿಜೆಪಿಯವರು ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ವರದಿ ಬಂದ ತಕ್ಷಣವೇ ಬಿಡುಗಡೆ ಮಾಡುತ್ತೇವೆ. ದೇಶಭಕ್ತಿಯನ್ನ ಬಿಜೆಪಿಯವರು ಹೇಳಿಕೊಡುವ ಅಗತ್ಯವಿಲ್ಲ ಅಂತ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ