ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಾಸ್ ರಾಜೀನಾಮೆ..!

Twitter
Facebook
LinkedIn
WhatsApp
ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪಾರಾಸ್ ರಾಜೀನಾಮೆ..!

ಬಿಜೆಪಿ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ ಪಶುಪತಿ ಕುಮಾರ್ ಪಾರಸ್(Pashupati Kumar Paras) ಕೇಂದ್ರ ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸೀಟು ಹಂಚಿಕೆ ವಿಚಾರವಾಗಿ ಅಸಮಾಧಾನದಿಂದ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಪಶುಪತಿ ಪಾರಸ್ ಅವರ ಸೋದರಳಿಯ ಚಿರಾಗ್ ಪಾಸ್ವಾನ್ ಅವರೊಂದಿಗೆ ಬಿಜೆಪಿ ಸೀಟು ಹಂಚಿಕೆಯನ್ನು ಅಂತಿಮಗೊಳಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆಯಾಗಿದೆ.

ಪ್ರಧಾನ ನರೇಂದ್ರ ಮೋದಿ ದೊಡ್ಡ ನಾಯಕರು. ಆದರೆ ನನಗೆ ಮತ್ತು ನನ್ನ ಪಕ್ಷಕ್ಕೆ ಅನ್ಯಾಯವಾಗಿದೆ ಎಂದು ಪರಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷವು ಐದು ಮಂದಿ ಸಂಸದರನ್ನು ಹೊಂದಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಹೀಗಿದ್ದೂ ನಮಗೆ ಅನ್ಯಾಯವೆಸಗಲಾಗಿದೆ. ಹೀಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅವರು ತಿಳಿಸಿದ್ದಾರೆ.

ಸೀಟು ಹಂಚಿಕೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಎಲ್​ಜೆಪಿ(ರಾಮ್​ ವಿಲಾಸ್) 5 ಲೋಕಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುವ ಅವಕಾಶ ಪಡೆದಿದ್ದಕ್ಕಾಗಿ ಪಶುಪತಿ ಕೋಪಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ಘೋಷಣೆಗೂ ಮುನ್ನ ನಮ್ಮ ಜತೆ ಮಾತನಾಡಿಲ್ಲ ಎಂದು ಪಶುಪತಿ ಪರಾಸ್ ಹೇಳಿದ್ದಾರೆ.

ರಾಮ್ ವಿಲಾಸ್ ಪಾಸ್ವಾನ್ ಅವರ ಸಹೋದರ ಪಶುಪತಿ ಪಾರಸ್ ಅವರು ಹಾಜಿಪುರದ ಹಾಲಿ ಸಂಸದರಾಗಿದ್ದು, ಕೇಂದ್ರ ಆಹಾರ ಸಂಸ್ಕರಣಾ ಖಾತೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈ ಬಾರಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಕಾರಣ ಪಶುಪತಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

'ಸದಾನಂದ ಗೌಡರು ಪಕ್ಷ ಬಿಡಲ್ಲ, ಬಿಜೆಪಿಯಲ್ಲೇ ಇರುತ್ತಾರೆ'- ವಿಜಯೇಂದ್ರ

ಸದಾನಂದ ಗೌಡರು ಪಕ್ಷ ಬಿಡಲ್ಲ, ಬಿಜೆಪಿಯಲ್ಲೇ ಇರುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಅವರ ನಾಯಕರಿಗಿಂತ ನಮ್ಮ ಪಕ್ಷದ ನಾಯಕರ ಮೇಲೆಯೇ ಪ್ರೀತಿ ಹೆಚ್ಚು. ಕಳೆದೊಂದು ವಾರದ ಎಂಬಿ ಪಾಟೀಲ್ ಹಾಗೂ ಇತರ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಗಮನಿಸಿದರೆ ಬಿಜೆಪಿ ನಾಯಕರ ಮೇಲೆ ಅವರಿಗೆ ವಿಶ್ವಾಸ ಬಂದಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಜೆಡಿಎಸ್ ಅಸಮಾಧಾನ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಪಕ್ಷದ ಮೈತ್ರಿ ವಿಚಾರದಲ್ಲಿ ಜೆಡಿಎಸ್​​ಗೆ ಸಮಾಧಾನ ಆಗುವಂಥ ತೀರ್ಮಾನವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆ. ಅಸಮಾಧಾನ ಶಮನವಾಗಲು ಯಾವಾಗ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಜೆಡಿಎಸ್ ಮತ್ತು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಹೇಳಿದರು.

ಇನ್ನು ಕೆಎಸ್ ಈಶ್ವರಪ್ಪ ಅವರ ಮನವೊಲಿಕೆ ಪ್ರಯತ್ನ ಕೈಬಿಡಲ್ಲ. ಅವರು ಹಿರಿಯರು, ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿದ್ದು, ಸತ್ಯದ ಅರಿವಾದ ಮೇಲೆ ಎಲ್ಲವೂ ಸರಿಹೋಗಲಿದೆ. ಇಂದು ಮತ್ತು ನಾಳೆ ದೆಹಲಿಯಲ್ಲಿ ಸಭೆ ಇದ್ದು, ಬಾಕಿ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist