ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವೈಯಕ್ತಿಕ ದ್ವೇಷ; ಕಾರು ಹತ್ತಿಸಿ ಮೂವರು ಮಕ್ಕಳ ಕೊಲೆಗೆ ಯತ್ನ, ವಿಡಿಯೋ ವೈರಲ್!

Twitter
Facebook
LinkedIn
WhatsApp
43 1

ಲಕ್ನೋ: ನಡೆದುಕೊಂಡು ಹೋಗುತ್ತಿದ್ದ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಕಾರು ಹತ್ತಿಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಉತ್ತರಪ್ರದೆಶದ (Uttarpradesh) ಲಕ್ನೋದಲ್ಲಿ ಮಂಗಳವಾರ ನಡೆದಿದೆ.

ಘಟನೆಯ ದೃಶ್ಯವು ಸ್ಥಳೀಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ಸಖತ್ ವೈರಲ್ ಆಗುತ್ತಿದ್ದು, ಚಾಲಕನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ವೀಡಿಯೋದಲ್ಲೇನಿದೆ..?: ಇಬ್ಬರು ಹುಡುಗರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾರೆ. ಅದರಲ್ಲಿ ಓರ್ವ ಚಿಕ್ಕ ಮಗುವನ್ನು ಎತ್ತಿಕೊಂಡಿದ್ದಾನೆ. ಹೀಗೆ ಅವರು ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಎದರುರಿನಿಂದ ಬಂದ ಸ್ವಿಫ್ಟ್ ಡಿಸೈರ್ (Swift Desire) ಕಾರನ್ನು ಚಾಲಕ ಮಕ್ಕಳ ಮೇಲೆ ಹತ್ತಿಸಿದ್ದಾನೆ. ಆದರೆ ಅದೃಷ್ಟವಶಾತ್ ಮೂವರು ಮಕ್ಕಳು ಭಾರೀ ಅಪಾಯದಿಂದ ಪಾರಾಗಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಪೊಲೀಸರು ಕೂಡ ಸ್ಥಳಕ್ಕಾಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಚಾಲಕನನ್ನು ಗೋವಿಂದ್ ಯಾದವ್ ಎಂದು ಗುರುತಿಸಲಾಗಿದೆ. ಈತ ಅದೇ ಏರಿಯಾದ ನಿವಾಸಿಯಾಗಿದ್ದು, ಮಕ್ಕಳ ತಂದೆಯ ಜೊತೆಗೆ ಇದ್ದಂತಹ ವೈಯಕ್ತಿಕ ದ್ವೇಷದಿಂದ ಈ ಕೃತ್ಯ ಎಸಗಿದ್ದಾನೆ ಎಂಬುದಾಗಿ ತನಿಖೆಯ ವೇಳೆ ಬಯಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಸ್ಫೋಟಕ್ಕೆ ಸಂಚು – ಐವರು ಶಂಕಿತ ಉಗ್ರರು ಅರೆಸ್ಟ್‌

ಬೆಂಗಳೂರು: ಉಗ್ರರ (Terrorist) ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ (Bengaluru) ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು (Suspected Terrorists) ಕೇಂದ್ರ ಗುಪ್ತಚರ ಇಲಾಖೆಯ (Central Intelligence Agency) ಮಾಹಿತಿಯ ಮೇರೆಗೆ ಸಿಸಿಬಿ (CCB) ಬಂಧಿಸಿದೆ.

ಸುಹೇಲ್, ಉಮರ್, ತಬ್ರೇಜ್, ಮುದಾಸಿರ್, ಫೈಜಲ್ ರಬ್ಬಾನಿಯನ್ನು ಬಂಧಿಸಲಾಗಿದ್ದು, ಈ ತಂಡದ ನಾಯಕ ಜುನೈದ್ ನಾಪತ್ತೆಯಾಗಿದ್ದಾನೆ. ಶಂಕಿತ ಉಗ್ರರೆಲ್ಲರೂ ಬೆಂಗಳೂರಿನ ನಿವಾಸಿಗಳಾಗಿದ್ದು ಜನಸಂದಣಿ ಇರುವ ಪ್ರದೇಶದಲ್ಲಿ ಬ್ಲ್ಯಾಸ್ಟ್ ನಡೆಸಲು ಇವರು ತಯಾರಿ ನಡೆಸಿದ್ದರು.

ಎನ್‌ಐಎ (NIA) ಮತ್ತು ಸಿಸಿಬಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದೆ. ಶಂಕಿತರ ಮೇಲೆ ಹೆಬ್ಬಾಳ (Hebbala) ಠಾಣೆಯಲ್ಲಿ ಸಿಸಿಬಿ ಪ್ರಕರಣ ದಾಖಲಿಸಿದೆ. ವಶಕ್ಕೆ ಪಡೆದ ಶಂಕಿತರನ್ನು ಆಡುಗೋಡಿಯ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆ ನಡೆಸುತ್ತಿದೆ. 

ಆರ್‌ಟಿ ನಗರದ ಸುಲ್ತಾಲ್ ಪಾಳ್ಯದ ಸೊಹೈಲ್ ಮನೆ ಬಳಿ ಶಂಕಿತರು ಸಭೆ ನಡೆಸುತ್ತಿದ್ದಾಗ ಐವರನ್ನು ಬಂಧಿಸಲಾಗಿದೆ. ಎರಡು ಸ್ಯಾಟಲೈಟ್‌ ಫೋನ್‌, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು ಬಂಧಿತರಿಂದ ವಶ ಪಡಿಸಲಾಗಿದೆ.

4 ಗ್ರೆನೇಡ್ ಹೊಂದಿದ್ದ ಶಂಕಿತ ಉಗ್ರರು ಬೆಂಗಳೂರಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ ಪ್ರಾಥಮಿಕ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ