ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಕರೆತರಲು ಪ್ಲ್ಯಾನ್ ರೆಡಿ ; ಸುರಕ್ಷಿತವಾಗಿ ಹೊರ ತೆಗೆಯುವ ಪ್ರಾತ್ಯಕ್ಷಿಕೆ ವಿಡಿಯೋ ಇಲ್ಲಿದೆ!

Twitter
Facebook
LinkedIn
WhatsApp
ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಕರೆತರಲು ಪ್ಲ್ಯಾನ್ ರೆಡಿ ; ಸುರಕ್ಷಿತವಾಗಿ ಹೊರ ತೆಗೆಯುವ ಪ್ರಾತ್ಯಕ್ಷಿಕೆ ವಿಡಿಯೋ ಇಲ್ಲಿದೆ!
ಡೆಹ್ರಾಡೂನ್: ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel Collapse) ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಸುರಕ್ಷಿತವಾಗಿ ಹೊರಕರೆತರಲಾಗುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತೋರಿಸಿದೆ. ಅದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವುದಕ್ಕೆ ಮಾರ್ಗ ಸಿದ್ಧಪಡಿಸಲು ಅವಶೇಷಗಳ ಮೂಲಕ ಪೈಪ್‌ಲೈನ್‌ ಹಾಕಲಾಗಿದೆ. ಅದರ ಮೂಲಕ ಗಾಲಿ ಸ್ಟ್ರೆಚರ್‌ಗಳಲ್ಲಿ (wheeled stretchers) ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರಕ್ಕೆ ಕರೆತರಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಿಳಿಸಿದ್ದಾರೆ.

ಕಾರ್ಮಿಕರನ್ನು ಸುರಕ್ಷಿತವಾಗಿ ಹೇಗೆ ಕರೆತರಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅವಶೇಷಗಳ ಮೂಲಕ ಹಾಕಿರುವುದು ವೆಲ್ಡಿಂಗ್‌ ಮಾಡಿರುವ ಪೈಪ್‌ಲೈನ್‌. ಎನ್‌ಡಿಆರ್‌ಎಫ್ ಸಿಬ್ಬಂದಿ, ಗಾಲಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ಕಾರ್ಮಿಕರ ಕೈಕಾಲುಗಳಿಗೆ ವೆಲ್ಡಿಂಗ್‌ ಭಾಗದ ಪೈಪ್‌ಲೈನ್‌ ತಾಗಿ ಗಾಯಗಳಾಗದಂತೆ ನೋಡಿಕೊಳ್ಳಲು, ಅವರು ಸ್ಟ್ರೆಚರ್‌ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಈಗ ಅಂತಿಮ ಹಂತ ತಲುಪಿದೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‌ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ