ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮೆಜಾನ್ ಪ್ರದೇಶದಲ್ಲಿ ವಿಮಾನ ಪತನ – ಮಗು ಸೇರಿ 12 ಮಂದಿ ಸಾವು

Twitter
Facebook
LinkedIn
WhatsApp
ಅಮೆಜಾನ್ ಪ್ರದೇಶದಲ್ಲಿ ವಿಮಾನ ಪತನ – ಮಗು ಸೇರಿ 12 ಮಂದಿ ಸಾವು

ರೆಸಿಲಿಯಾ: ಬ್ರೆಜಿಲ್‌ನ (Brazil) ಅಮೆಜಾನ್ (Amazon) ಪ್ರದೇಶದಲ್ಲಿ ಸಣ್ಣ ವಿಮಾನವೊಂದು ಅಪಘಾತಕ್ಕೀಡಾಗಿದ್ದು (Plane Crash), ಒಂದು ಮಗು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

ವಾಯುವ್ಯ ರಾಜ್ಯವಾದ ಎಕರೆ (Acre) ಸರ್ಕಾರದ ಹೇಳಿಕೆಯ ಪ್ರಕಾರ, ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಎಕರೆ ರಾಜ್ಯದ ರಾಜಧಾನಿ ರಿಯೊ ಬ್ರಾಂಕೊದಲ್ಲಿನ (Rio Branco) ಮುಖ್ಯ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ.

ಘಟನೆಯಲ್ಲಿ ಒಂಬತ್ತು ವಯಸ್ಕರು ಮತ್ತು ಒಂದು ಮಗು ಸೇರಿದಂತೆ ಒಟ್ಟು ಹತ್ತು ಪ್ರಯಾಣಿಕರು ಮತ್ತು ಪೈಲಟ್ ಹಾಗೂ ಸಹ ಪೈಲಟ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಬ್ರೆಜಿಲ್‌ನ ಪೆರು ಮತ್ತು ಬೊಲಿವಿಯಾದ ಗಡಿಯ ಸಮೀಪವಿರುವ ದೂರದ ಪ್ರದೇಶದಲ್ಲಿ ವಿಮಾನ ಪತನವಾಗಿದ್ದು, ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಅನೇಕ ಪ್ರಯಾಣಿಕರು ವೈದ್ಯಕೀಯ ಆರೈಕೆಯ ನಂತರ ನೆರೆಯ ಅಮೆಜಾನಾಸ್ ರಾಜ್ಯಕ್ಕೆ ಮರಳುತ್ತಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!

ಇಸ್ಲಾಮಾಬಾದ್: ತನ್ನ ಫೇಸ್‍ಬುಕ್ (Facebook) ಗೆಳೆಯನನ್ನು ಮದುವೆ ಮಾಡಿಕೊಳ್ಳಲೆಂದು ಪತಿ ಹಾಗೂ ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ (Pakistan) ತೆರಳಿದ್ದಾಕೆಗೆ ಇದೀಗ ತನ್ನ ಮಕ್ಕಳನ್ನು ನೋಡುವ ಬಯಕೆಯಾಗಿದೆ.

ಈ ಸಂಬಂಧ ಅಂಜು ಪಾಕಿಸ್ತಾನದ ಪತಿ ನುಸ್ರುಲ್ಲಾ ಮಾತನಾಡಿದ್ದಾನೆ. ಅಂಜು ತಮ್ಮ ಮಕ್ಕಳನ್ನು ಭೇಟಿ ಮಾಡಲು ಭಾರತಕ್ಕೆ (India) ತೆರಳಲು ಕಾಯುತ್ತಿದ್ದಾಳೆ ಎಂದು ತಿಳಿಸಿದ್ದಾನೆ.

ತನ್ನ ಇಬ್ಬರು ಮಕ್ಕಳನ್ನು ಪ್ರತಿದಿನ ನೆನಪು ಮಾಡಿಕೊಂಡು ಅಂಜು ಮಾನಸಿಕವಾಗಿ ಕುಗ್ಗುತ್ತಿದ್ದಾಳೆ. ಹೀಗಾಗಿ ಭಾರತಕ್ಕೆ ಹೋಗಿ ಮಕ್ಕಳನ್ನು ಭೇಟಿ ಮಾಡಬೇಕು ಎಂದು ಪಟ್ಟುಹಿಡಿದಿದ್ದಾಳೆ. ಅಂತೆಯೇ ಎನ್‍ಒಸಿಇಗಾಗಿ (ನಿರಾಕ್ಷೇಪಣಾ ಪ್ರಮಾಣಪತ್ರ) ಅರ್ಜಿ ಸಲ್ಲಿಸಿದ್ದಾಳೆ. ಪಾಕಿಸ್ತಾನದ ಆಂತರಿಕ ಸಚಿವಾಲಯಾದಿಂದ ಇದಕ್ಕೆ ಅನುಮತಿ ಸಿಕ್ಕ ಕೂಡಲೇ ವಾಘಾ ಗಡಿ ಮೂಲಕ ಭಾರತಕ್ಕೆ ತೆರಳಿ ಮಕ್ಕಳನ್ನು ಭೇಟಿ ಮಾಡಿ ಮತ್ತೆ ಪಾಕಿಸ್ತಾನಕ್ಕೆ ಮರಳುತ್ತಾಳೆ ಎಂದು ಆತ ತಿಳಿಸಿದ್ದಾನೆ.

ಸಾಮಾಜಿಕ ಜಾಲತಾಣ ಫೇಸ್‍ಬುಕ್ ಮೂಲಕ ಅಂಜುಗೆ ಪಾಕಿಸ್ತಾನದ ನುಸ್ರುಲ್ಲಾ ಪರಿಚಯವಾಗಿದೆ. ಈ ಪರಿಚಯವು ಪ್ರೇಮಕ್ಕೆ ತಿರುಗಿ ಆತನನ್ನು ಭೇಟಿ ಮಾಡಲು ಬಯಸುತ್ತಾಳೆ. ಅಂತೆಯೇ ತನ್ನಿಬ್ಬರು ಮಕ್ಕಳು ಹಾಗೂ ಪತಿಯನ್ನು ಬಿಟ್ಟು ಪಾಕ್‍ಗೆ ತೆರಳಿದ್ದಾಳೆ. ಇದೀಗ ಆಕೆ ತನ್ನ ಮಕ್ಕಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದಾಳೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ