ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನವೆಂಬರ್ ತಿಂಗಳಲ್ಲೇ ಪಿಎಂ ಕಿಸಾನ್ 15 ನೇ ಕಂತು ಬಿಡುಗಡೆ; ಇ-ಕೆವೈಸಿ ಅಪ್ಡೇಟ್ ಕಡ್ಡಾಯ!

Twitter
Facebook
LinkedIn
WhatsApp
ನವೆಂಬರ್ ತಿಂಗಳಲ್ಲೇ ಪಿಎಂ ಕಿಸಾನ್ 15 ನೇ ಕಂತು ಬಿಡುಗಡೆ; ಇ-ಕೆವೈಸಿ ಅಪ್ಡೇಟ್ ಕಡ್ಡಾಯ!

ಕೋಟ್ಯಂತರ ಫಲಾನುಭವಿ ರೈತರು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತಿನ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಈ ನಡುವೆ 15 ನೇ ಕಂತು ದೀಪಾವಳಿಯ ಮೊದಲು ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. 8 ಕೋಟಿ ರೂಪಾಯಿಗೂ ಹೆಚ್ಚು ರೈತರು ಈಗ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 15 ನೇ ಕಂತು ಪಡೆಯಲು ಕಾಯುತ್ತಿದ್ದಾರೆ.

ಈ ಮೊತ್ತವನ್ನು ನವೆಂಬರ್ 12 ರಂದು ವಿತರಿಸಲಾಗುವುದು. ದೀಪಾವಳಿಯ ಮೊದಲು ರೈತರ ಖಾತೆಗಳಿಗೆ ಹಣವನ್ನು ಕಳುಹಿಸುವುದು ಕೇಂದ್ರದ ಯೋಜನೆಯಾಗಿದೆ ಎಂದು ಝೀ ನ್ಯೂಸ್ ವರದಿ ಮಾಡಿದೆ. ಇನ್ನು ಪಿಎಂ ಕಿಸಾನ್ ಯೋಜನೆಯ 14 ನೇ ಕಂತು ಜುಲೈನಲ್ಲಿ ಬಿಡುಗಡೆಯಾಗಿದೆ.

ಆದರೆ ಈ ಹಿಂದೆಯೂ ಹಲವಾರು ಮಂದಿಗೆ ಪಿಎಂ ಕಿಸಾನ್ ನಿಧಿ ಮೊತ್ತವು ಜಮೆಯಾಗಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15 ನೇ ಕಂತನ್ನು ಪಡೆಯಬೇಕಾದರೆ, ಇಕೆವೈಸಿ ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. ಇಲ್ಲದಿದ್ದರೆ, ಯೋಜನೆಯ ಪ್ರಯೋಜನಗಳಿಂದ ವಂಚಿತರಾಗುತ್ತಾರೆ.

ಕೆವೈಸಿ ಮಾಡಿಕೊಳ್ಳುವುದು

ಹೇಗೆ? ಹಂತ 1: ಅಧಿಕೃತ ಪಿಎಂ ಕಿಸಾನ್ ವೆಬ್‌ಸೈಟ್ https://pmkisan.gov.in/ ಗೆ ಭೇಟಿ ನೀಡಿ ಹಂತ

2: ಬಲಭಾಗದಲ್ಲಿ, ಮುಖಪುಟದ ಕೆಳಗೆ, ಇಕೆವೈಸಿ ಕಾಣಲಿದೆ.

ಹಂತ 3: ಫಾರ್ಮರ್ಸ್ ಕಾರ್ನರ್‌ನ ಕೆಳಗೆ ಇಕೆವೈಸಿ ನಮೂದಿಸುವ ಬಾಕ್ಸ್ ಇದೆ

ಹಂತ 4: ಅಲ್ಲಿ ನೀವು e-kyc ಅನ್ನು ಕ್ಲಿಕ್ ಮಾಡಿ, ಆಧಾರ್ Ekyc ಯ ಪುಟ ತೆರೆಯಲಿದೆ

ಹಂತ 5: ಈಗ, ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು

ಹಂತ 6: ನಂತರ ತೋರಿಸಿರುವ ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕು

ಹಂತ 7: ಬಳಿಕ search ಬಟನ್ ಕ್ಲಿಕ್‌ ಮಾಡಬೇಕು

ಹಂತ 8: ಅದರ ನಂತರ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಲಾದ ನಿಮ್ಮ ಮೊಬೈಲ್ ಸಂಖ್ಯೆಯನ್ನು ನೀವು ನಮೂದಿಸಬೇಕು

ಹಂತ 9: ಬಳಿಕ Get OTP ಅನ್ನು ಕ್ಲಿಕ್‌ ಮಾಡಿ, ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ

ಹಂತ 10: ಒಟಿಪಿಯನ್ನು ನಮೂದಿಸಿ, Submit ಮಾಡಿ

ಹಂತ 11: ನೀವು Submit ಬಟನ್ ಕ್ಲಿಕ್‌ ಮಾಡಿದ ಬಳಿಕ ನಿಮ್ಮ ಪಿಎಂ ಕಿಸಾನ್ ಇ-ಕೆವೈಸಿ ಯಶಸ್ವಿಯಾಗುತ್ತದೆ

ಸ್ಟೇಟಸ್ ಪರಿಶೀಲನೆ ಮಾಡುವುದು ಹೇಗೆ?

ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್‌ www.pmkisan.gov.in ಗೆ ಭೇಟಿ ನೀಡಿ.

ಹಂತ 2: ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ.

ಹಂತ 3: ನಂತರ Beneficiary Status ಮೇಲೆ ಕ್ಲಿಕ್ ಮಾಡಿ.

ಹಂತ 4: ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ.

ಹಂತ 5: ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ

ಏನಿದು ಪಿಎಂ ಕಿಸಾನ್ ಯೋಜನೆ?

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರಿಗೆ ಆರ್ಥಿಕ ನೆರವು ನೀಡುವ ಮೂಲಕ ಸಹಾಯ ಮಾಡಲು ಕೇಂದ್ರದ ಉಪಕ್ರಮವಾಗಿದೆ. ಪಿಎಂ ಮೋದಿ ಈ ಕೇಂದ್ರ ಯೋಜನೆಯನ್ನು ಫೆಬ್ರವರಿ 24, 2019 ರಂದು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪ್ರಾರಂಭಿಸಿದರು. ಯೋಜನೆಯ ಭಾಗವಾಗಿ, ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರತಿ ವರ್ಷಕ್ಕೆ ಆರು ಸಾವಿರ ರೂಪಾಯಿ ಆದಾಯ ಬೆಂಬಲವನ್ನು ತಲಾ 2000 ರೂಪಾಯಿಯಂತೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಈ ಹಣವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ