ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

PM Kisan: ಪಿಎಂ ಕಿಸಾನ್ 16ನೇ ಕಂತಿನ ಹಣ ಇಂದು ಬಿಡುಗಡೆ..!

Twitter
Facebook
LinkedIn
WhatsApp
PM Kisan: ಪಿಎಂ ಕಿಸಾನ್ 16ನೇ ಕಂತಿನ ಹಣ ಇಂದು ಬಿಡುಗಡೆ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣ ಇಂದು ಬುಧವಾರ ಬಿಡುಗಡೆ ಆಗುತ್ತಿದೆ. ಒಂಬತ್ತು ಕೋಟಿಗೂ ಹೆಚ್ಚು ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಹಣ ಇವತ್ತಿನಿಂದ ಜಮೆ ಆಗಲು ಶುರುವಾಗಲಿದೆ. ಡಿಸೆಂಬರ್​ನಿಂದ ಮಾರ್ಚ್​ವರೆಗಿನ ಅವಧಿಯ 2,000 ರೂ ಹಣ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಆಗಲಿದೆ. 16ನೇ ಕಂತಿನ ಹಣದ ಬಿಡುಗಡೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಿಸಲಿದ್ದಾರೆ.

ರೈತರ ವ್ಯವಸಾಯ ಕಾರ್ಯಕ್ಕೆ ಅನುಕೂಲವಾಗಲೆಂದು ಸರ್ಕಾರ 2019ರಲ್ಲಿ ಆರಂಭಿಸಿದ ಯೋಜನೆ ಪಿಎಂ ಕಿಸಾನ್ ಸಮ್ಮಾನ್ ನಿಧಿ. ಇದರ ಅಡಿಯಲ್ಲಿ ರೈತರಿಗೆ 2,000 ರೂಗಳ 3 ಕಂತುಗಳಂತೆ ವರ್ಷಕ್ಕೆ 6,000 ರೂ ಹಣವನ್ನು ಸರ್ಕಾರ ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸುತ್ತದೆ. ಏಪ್ರಿಲ್​ನಿಂದ ಜುಲೈ, ಆಗಸ್ಟ್​ನಿಂದ ನವೆಂಬರ್, ಮತ್ತು ಡಿಸೆಂಬರ್​ನಿಂದ ಮಾರ್ಚ್​ವರೆಗೆ ಈ ಮೂರು ಅವಧಿಯಲ್ಲಿ ರೈತರಿಗೆ 2,000 ರೂ ಹಣ ಸಿಗುತ್ತದೆ.

16ನೇ ಕಂತಿನ ಹಣ ನಿಮಗೆ ಸಿಗುತ್ತಾ?

ನೀವು ಪಿಎಂ ಕಿಸಾನ್ ಯೊಜನೆಗೆ ಹೆಸರು ನೊಂದಾಯಿಸಿದ್ದರೆ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಸೇರಿಸಲಾಗಿರುತ್ತದೆ. ಈ ಪಟ್ಟಿಯನ್ನು ನೋಡುವ ಕ್ರಮ ಇಲ್ಲಿದೆ.

  • ಪಿಎಂ ಕಿಸಾನ್ ಅಧಿಕೃತ ಪೋರ್ಟಲ್​ಗೆ ಹೋಗಿ: pmkisan.gov.in/
  • ಕೆಳಗೆ ತುಸು ಸ್ಕ್ರೋಲ್ ಮಾಡಿದರೆ ಫಾರ್ಮರ್ಸ್ ಕಾರ್ನರ್ ನೋಡಬಹುದು. ಅದರಲ್ಲಿ ಬೆನಿಫಿಶಿಯರಿ ಲಿಸ್ಟ್ ಕ್ಲಿಕ್ ಮಾಡಿ.
  • ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು, ಮತ್ತು ಗ್ರಾಮವನ್ನು ಆಯ್ದುಕೊಳ್ಳಿ.
  • ಬಳಿಕ ಗೆಟ್ ರಿಪೋರ್ಟ್ ಕ್ಲಿಕ್ ಮಾಡಿ.
  • ಇದರಲ್ಲಿ ಗ್ರಾಮದಲ್ಲಿರುವ ಎಲ್ಲಾ ಪಿಎಂ ಕಿಸಾನ್ ಫಲಾನುಭವಿಗಳ ಹೆಸರುಗಳಿರುವ ಪಟ್ಟಿ ಪ್ರತ್ಯಕ್ಷವಾಗುತ್ತದೆ.
  • ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಾತ್ರಿಪಡಿಸಿಕೊಳ್ಳಿ.

ಬೆನಿಫಿಶಿಯರಿ ಲಿಸ್ಟ್​ನಲ್ಲಿ ಹೆಸರಿಲ್ಲದಿದ್ದರೆ ಏನು?

ಒಂದು ವೇಳೆ ನೀವು ಯೋಜನೆಗೆ ನೊಂದಾಯಿಸಿದ್ದೂ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಅದಕ್ಕೆ ಬೇರೆ ಕಾರಣಗಳಿರಬಹುದು. ನೀವು ಇಕೆವೈಸಿ ಮಾಡಿಲ್ಲದೇ ಇರಬಹುದು. ಅಥವಾ ತಡವಾಗಿ ಯೋಜನೆಗೆ ನೊಂದಾಯಿಸಿರಬಹುದು.

ನೀವು ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಕೆವೈಸಿ ಅಪ್​ಡೇಟ್ ಮಾಡಬಹುದು. ಅಥವಾ ಆನ್​ಲೈನ್​ನಲ್ಲೇ ಇಕೆವೈಸಿ ನೀಡಬಹುದು. ಪಿಎಂ ಕಿಸಾನ್ ಪೋರ್ಟಲ್​ನ ಫಾರ್ಮರ್ಸ್ ಕಾರ್ನರ್​ನಲ್ಲಿ ಮೊದಲ ಟ್ಯಾಬ್​ನಲ್ಲೇ ಇಕೆವೈಸಿ ಲಿಂಕ್ ಕಾಣಬಹುದು. ಅದನ್ನು ಕ್ಲಿಕ್ ಮಾಡಿ ನಿಮ್ಮ ಆಧಾರ್ ದಾಖಲೆಯನ್ನು ಅಪ್​ಡೇಟ್ ಮಾಡಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ