ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಸಚಿವ ಜಮೀರ್ ಅಹಮ್ಮದ್ ಖಾನ್ ಇದ್ದ ಹೋಟೆಲ್​​ ಮೇಲೆ ಪೊಲೀಸ್ ದಾಳಿ...!

Twitter
Facebook
LinkedIn
WhatsApp
ಸಚಿವ ಜಮೀರ್ ಅಹಮ್ಮದ್ ಖಾನ್ ಇದ್ದ ಹೋಟೆಲ್​​ ಮೇಲೆ ಪೊಲೀಸ್ ದಾಳಿ...!

ಹೈದರಾಬಾದ್, (ನವೆಂಬರ್ 23): ತೆಲಂಗಾಣದಲ್ಲಿ ವಿಧಾನಸಬೆ ಚುನಾವಣೆ (telangana assembly election 2023) ರಂಗೇರಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಕರ್ನಾಟಕದ ನಾಯಕರು (Karnataka Leaders) ಸಹ ತೆರಳಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರು ಸಹ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿದ್ದಾರೆ. ಅದರಂತೆ ಸಚಿವ ಜಮೀರ್ ಅಹಮ್ಮದ್ ಖಾನ್ (zameer ahmed khan ಮತ ಬೇಟೆ ನಡೆಸಿದ್ದಾರೆ. ಇದರ ಮಧ್ಯೆ ಜಮೀರ್ ತಂಗಿದ್ದ ಹೋಟೆಲ್​ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಜಮೀರ್ ಅಹಮ್ಮದ್ ಖಾನ್ ಉಳಿದುಕೊಂಡಿದ್ದ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ನಿನ್ನೆ(ನವೆಂಬರ್ 22) ತಡರಾತ್ರಿ ದಾಳಿಯಾಗಿದೆ.

ಚುನಾವಣೆಗೆ ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ನಾನು ಉಳಿದುಕೊಂಡಿರುವ ಹೈದರಾಬಾದ್ ನಗರದ ಪಾರ್ಕ್ ಹಯಾತ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಆದ್ರೆ, ಅವರಿಗೆ ಏನು ಸಿಕ್ಕಿಲ್ಲ.

ತೆಲಂಗಾಣದಲ್ಲಿಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಮತ್ತು ರಾಜ್ಯದ ಬಿಆರ್‌ಎಸ್ ಸರ್ಕಾರ ಹತಾಶೆಗೊಂಡಿದ್ದು, ಜಂಟಿ ರಾಜಕೀಯ ದಾಳಿ ನಡೆಸಿವೆ. ಇದು ನಮ್ಮನ್ನು ಹೆದರಿಸಿ ಹಿಂದಕ್ಕೆ ಕಳುಹಿಸುವ ತಂತ್ರವಾಗಿದೆ. ಆದರೆ ನಾವು ಇದಕ್ಕೆ ಹೆದರುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಗೌರಿಬಿದನೂರು ಕಾಂಗ್ರೆಸ್ ನಾಯಕ ಎನ್​ಹೆಚ್​ ಶಿವಶಂಕರ್ ರೆಡ್ಡಿ ವಾಸ್ತವ್ಯ ಇದ್ದ ಹೋಟೆಲ್​ ಮೇಲೆ ಸಹ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದರು.

ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ ಪೋಸ್ಟ್​​ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ ನೀಡಲಾಗುತ್ತಿದ್ದ ಪೌಷ್ಠಿಕ ಆಹಾರವನ್ನು – ಟೆಂಡರ್ ದುಬಾರಿಯಾಗುತ್ತಿದೆ, ಟೆಂಡರ್​​​ಗೆ ಫಂಡ್ ಇಲ್ಲ ಎಂದು ನಿಲ್ಲಿಸಿರುವುದು ರಾಜ್ಯ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ. ಮಳೆ ಇಲ್ಲದ ಕಾರಣ ಸಿದ್ದಿ ಜನಾಂಗಕ್ಕೆ ಕೂಲಿಯೂ ಇಲ್ಲದೆ, ಸರ್ಕಾರ ಕೊಡುತ್ತಿದ್ದ ಆಹಾರ ಸಾಮಗ್ರಿಗಳೂ ಇಲ್ಲದೆ ಹಸಿವಿನಿಂದ ಪರಿತಪಿಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕೂಡಲೇ ಈ ಯೋಜನೆಗೆ ಹಣ ನೀಡಿ ನಮ್ಮ ಸಿದ್ಧಿ ಜನಾಂಗಕ್ಕೆ ಆಹಾರ ನೀಡಲಿ ಎಂದು ಯತ್ನಾಳ್ ಆಗ್ರಹಿಸಿದ್ದಾರೆ.

ಗಿರಿಜನ ಯೋಜನೆ 2011ರಿಂದ ಪ್ರಾರಂಭಗೊಂಡಿತ್ತು. ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿ ಆರು ತಿಂಗಳ ಕಾಲ, ಅಂದರೆ ಜೂನ್‌ನಿಂದ ಡಿಸೆಂಬರ್‌ವರೆಗೆ ಉಚಿತ ಪೌಷ್ಠಿಕ ಆಹಾರ ನೀಡಲಾಗುತ್ತಿತ್ತು.

ಸುಮಾರು 6000 ಸಿದ್ಧಿ ಕುಟುಂಬಗಳಿಗೆ ಪ್ರತೀ ತಿಂಗಳು ತಲಾ 8 ಕೆಜಿ ಅಕ್ಕಿ, 30 ಕೋಳಿ ಮೊಟ್ಟೆ, 6 ಕೆಜಿ ವಿವಿಧ ಬೇಳೆ ಕಾಳು, ಒಂದು ಲೀಟರ್‌ನ ಎರಡು ಪ್ಯಾಕೆಟ್ ಅಡುಗೆ ಎಣ್ಣೆ, ಅರ್ಧ ಲೀಟರ್ ತುಪ್ಪ, ಒಂದು ಕೆಜಿ ಬೆಲ್ಲ, ಒಂದು ಕೆಜಿ ಸಕ್ಕರೆ, ಮೂರು ಕೆಜಿ ತೊಗರಿ ಬೇಳೆ ಹಾಗೂ ಇತರ ಕಾಳುಗಳು ದೊರೆಯುತ್ತಿದ್ದವು. ಆದರೆ, ಕಳೆದ 6 ತಿಂಗಳುಗಳಿಂದ ಇವ್ಯಾವುವು ಕೂಡಾ ಸಿದ್ಧಿ ಬುಡಕಟ್ಟು ಸಮುದಾಯದ ಜನರಿಗೆ ದೊರೆಯುತ್ತಿಲ್ಲ.

ಪೌಷ್ಠಿಕಾಹಾರ ವಿತರಣೆ ಸ್ಥಗಿತಕ್ಕೆ ಅಧಿಕಾರಿಗಳು ಟೆಂಡರ್ ದುಬಾರಿ, ಟೆಂಡರ್‌ಗೆ ಅಷ್ಟು ಫಂಡ್ ಇಲ್ಲ, ಕೆಲವೊಂದು ಸಮಸ್ಯೆಗಳಿವೆ ಎಂದು ಸಬೂಬುಗಳನ್ನು ನೀಡಿದ್ದಾಗಿ ವರದಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist