ಮಂಗಳವಾರ, ಡಿಸೆಂಬರ್ 5, 2023
ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ-ಮುಂಬೈ ದಾಳಿಯ ಉಗ್ರನಿಗೆ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೋದಿ ಭದ್ರತೆಗಾಗಿ ತೆರಳುತ್ತಿದ್ದ ಪೊಲೀಸ್ ಕಾರು ಅಪಘಾತ ; 6 ಮಂದಿ ಪೊಲೀಸರು ದಾರುಣ ಸಾವು..!

Twitter
Facebook
LinkedIn
WhatsApp
ಮೋದಿ ಭದ್ರತೆಗಾಗಿ ತೆರಳುತ್ತಿದ್ದ ಪೊಲೀಸ್ ಕಾರು ಅಪಘಾತ ; 6 ಮಂದಿ ಪೊಲೀಸರು ದಾರುಣ ಸಾವು..!

ಜೈಪುರ: ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ರ‍್ಯಾಲಿಗಾಗಿ ನಿಯೋಜನೆಗೊಂಡಿದ್ದ ಆರು ಪೊಲೀಸರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚುರು ಜಿಲ್ಲೆಯ (Churu Accident) ಕನೋಟ ಪೊಲೀಸ್‌ ಪೋಸ್ಟ್‌ ಪ್ರದೇಶದಲ್ಲಿ ಟ್ರಕ್‌ಗೆ ಪೊಲೀಸರು ಇದ್ದ ಎಸ್‌ಯುವಿ ವಾಹನವು ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ (Rajasthan Accident) ಆರು ಪೊಲೀಸರು ಮೃತಪಟ್ಟರೆ, ಒಬ್ಬ ಪೊಲೀಸ್‌ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.

 

ನಾಗೌರ್‌ ಜಿಲ್ಲೆಯ ಝುಂಝುನುದಲ್ಲಿ ಭಾನುವಾರ (ನವೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರ ರ‍್ಯಾಲಿ ಆಯೋಜನೆಗೊಂಡಿತ್ತು. ಇದಕ್ಕಾಗಿ ಪೊಲೀಸರನ್ನು ವಿಐಪಿ ಡ್ಯೂಟಿಗೆ ನಿಯೋಜಿಸಲಾಗಿತ್ತು. ಪೊಲೀಸರು ಭಾನುವಾರ ಬೆಳಗಿನ ಜಾವ ಮಹೀಂದ್ರಾ ಜೈಲೋ (Xylo) ಕಾರಿನಲ್ಲಿ ನಾಗೌರ್‌ನಿಂದ ಝುಂಝುನುಗೆ ತೆರಳುತ್ತಿದ್ದರು. ಇನ್ನೂ ಮಂಜು ಮುಸುಕಿದ ವಾತಾವರಣ ಇದ್ದ ಕಾರಣ ಪೊಲೀಸರು ಇದ್ದ ಕಾರು ಟ್ರಕ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.

 

ಗಾಯಗೊಂಡಿರುವ ಮತ್ತೊಬ್ಬ ಪೊಲೀಸ್‌ ಅಧಿಕಾರಿ ಸ್ಥಿತಿಯೂ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಅಪಘಾತ ಸಂಭವಿಸುತ್ತಲೇ ಐವರು ಪೊಲೀಸರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಒಬ್ಬ ಪೊಲೀಸ್‌ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

 

ಮೃತ ಪೊಲೀಸರನ್ನು ರಾಮಚಂದ್ರ (56), ಸುಖರಾಮ್‌ (38), ಕುಂಭಾರಮ್‌ (35), ಧನರಾಮ್‌ (33), ಸುರೇಶ್‌ (35) ಹಾಗೂ ಮಹೇಂದ್ರ (51) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪೊಲೀಸ್‌ ಅಧಿಕಾರಿಯನ್ನು ಸುಖರಾಮ್‌ ಖೋಜಾ ಎಂಬುವರು ಗಾಯಗೊಂಡಿದ್ದಾರೆ. ಇವರು ನಾಗೌರ್‌ ಜಿಲ್ಲೆಯ ಖಿನ್ವಸಾರ್‌ ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಕೆಲ ತಿಂಗಳ ಹಿಂದೆ ಹರಿಯಾಣದಲ್ಲಿ ಧಾರ್ಮಿಕ ಮೆರವಣಿಗೆ ಮೇಲೆ ಕಲ್ಲು ತೂರಾಟ ಮತ್ತು ಕಾರುಗಳಿಗೆ ಬೆಂಕಿ ಹಚ್ಚಿದ ಗುಂಪೊಂದು ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಗೃಹರಕ್ಷಕರು ಮೃತಪಟ್ಟು, ಏಳು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಹಿಂಸಾಚಾರ ನಡೆಸುತ್ತಿದ್ದ ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ