ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಆರ್​ಸಿಬಿ ಪರ ಕಳಪೆ ಬ್ಯಾಟಿಂಗ್, ಕಾಮೆಂಟ್ರಿ ಮಾಡಲು ಸಜ್ಜಾದ ದಿನೇಶ್ ಕಾರ್ತಿಕ್!!

Twitter
Facebook
LinkedIn
WhatsApp
images 24

IPL 2023: ಐಪಿಎಲ್​ ಸೀಸನ್ 16 ಮುಕ್ತಾಯವಾಗಿದೆ. ಬಹುತೇಕ ಆಟಗಾರರು ತಮ್ಮ ರಾಷ್ಟ್ರೀಯ ತಂಡದ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಇತ್ತ ಟೀಮ್ ಇಂಡಿಯಾ ಆಟಗಾರರು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗಾಗಿ ಭರ್ಜರಿ ತಯಾರಿಯಲ್ಲಿದ್ದಾರೆ.

ಇದರ ನಡುವೆ ದಿನೇಶ್ ಕಾರ್ತಿಕ್ ಕೂಡ ಮತ್ತೆ ಕ್ರಿಕೆಟ್ ಲೋಕಕ್ಕೆ ಮರಳಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ. ಬದಲಾಗಿ ಕಾಮೆಂಟೇಟರ್ ಆಗಿ ಎಂಬುದು ವಿಶೇಷ.

ಹೌದು, ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರ ಉಳಿದಿರುವ ದಿನೇಶ್ ಕಾರ್ತಿಕ್ ಮತ್ತೆ ಕಾಮೆಂಟ್ರಿ ಮಾಡಲು ಸಜ್ಜಾಗಿದ್ದಾರೆ. ಅದು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪಂದ್ಯಕ್ಕಾಗಿ ಎಂಬುದು ವಿಶೇಷ.

ಈ ಹಿಂದೆಯೇ ಕಾಮೆಂಟೇಟರ್ ಆಗಿ ವೃತ್ತಿ ಜೀವನ ಆರಂಭಿಸಿದ್ದ ಡಿಕೆ ಐಪಿಎಲ್​ನಲ್ಲಿ ಮುಂದುವರೆದಿದ್ದರು. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ 13 ಇನಿಂಗ್ಸ್​ಗಳಲ್ಲಿ ಬ್ಯಾಟಿಂಗ್ ಮಾಡಿರುವ ದಿನೇಶ್ ಕಾರ್ತಿಕ್ ಕಲೆಹಾಕಿರುವುದು ಕೇವಲ 140 ರನ್ ಮಾತ್ರ.

ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದ ಕಾರಣ, ನೀವು ಫುಲ್ ಟೈಮ್ ಕಾಮೆಂಟೇಟರ್ ಆಗುವುದು ಉತ್ತಮ ಎಂದು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಡಿಕೆ ವೀಕ್ಷಕ ವಿವರಣೆಗಾರನಾಗಿ ಮತ್ತೆ ಕಾಣಿಸಿಕೊಳ್ಳಲು ಮುಂದಾಗಿದ್ದಾರೆ.

ಸದ್ಯ ಸ್ಪರ್ಧಾತ್ಮಕ ಕ್ರಿಕೆಟ್​ನಿಂದ ದೂರವೇ ಉಳಿದಿರುವ 37 ವರ್ಷದ ದಿನೇಶ್ ಕಾರ್ತಿಕ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮುಂದಿನ ಸೀಸನ್​ಗಾಗಿ ತಂಡದಲ್ಲೇ ಉಳಿಸಿಕೊಳ್ಳಲಿದೆಯಾ ಎಂಬುದೇ ಈಗ ದೊಡ್ಡ ಪ್ರಶ್ನೆ.

ಅಂದಹಾಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ