ಉಪ್ಪಿನಂಗಡಿ: ಬೈಕ್ ಮತ್ತು ಗೂಡ್ಸ್ ವಾಹನ ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು..!
Twitter
Facebook
LinkedIn
WhatsApp

ಉಪ್ಪಿನಂಗಡಿ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ.
ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಶ್ರೀಜಿಸ್(20ವ.) ಮೃತಪಟ್ಟವರು.
ಶ್ರೀಜಿಸ್‌ರವರು ರಾಮಕುಂಜ ಸಮೀಪವಿರುವ ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್ ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ, ತಾಯಿ, ಇಬ್ಬರು ಸಹೋದರರನ್ನು ಅಗಲಿದ್ದಾರೆ.