ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ; ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್ಐಎ ನ್ಯಾಯಾಲಯ ಆದೇಶ - ತಪ್ಪಿದಲ್ಲಿ ಮನೆ ಜಪ್ತಿ..!
Twitter
Facebook
LinkedIn
WhatsApp
ಸುಳ್ಯ, ಜೂ 28 : ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಕ್ಕೆ ಎನ್‌ಐಎ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಎನ್‌ಐಎ ಅಧಿಕಾರಿಗಳು ಈ ವಿಷಯವನ್ನು ಇಂದು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಅನೌನ್ಸ್ ಮಾಡುತ್ತಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ.
ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಮುಸ್ತಫ ಮನೆಗೆ ಎನ್‌ಐಎ ಅಧಿಕಾರಿಗಳು ನೋಟಿಸ್ ಅಂಟಿಸಿ ಬಂದಿದ್ದಾರೆ.