ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆಗೆ ತಯಾರಾಗಿ; ನಳಿನ್​ ಕುಮಾರ್​ ಕಟೀಲ್

Twitter
Facebook
LinkedIn
WhatsApp
ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆಗೆ ತಯಾರಾಗಿ; ನಳಿನ್​ ಕುಮಾರ್​ ಕಟೀಲ್

ಲೋಕಸಭಾ ಚುನಾವಣೆಗೆ(Lok Sabha election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ತಯಾರಿ ಬಗ್ಗೆ ಮಂಗಳೂರು ಬಿಜೆಪಿ(BJP) ಚುನಾವಣಾ ಕಚೇರಿಯಲ್ಲಿ ಇಂದು(ಮಾ.17) ಸಂಸದ ನಳಿನ್​ ಕುಮಾರ್​ ಕಟೀಲ್​ (Nalin Kumar Kateel) ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಹಿಂದೆಂದಿಗಿಂತ ಹೆಚ್ಚಿನ ಅಂತರದಲ್ಲಿ ಬ್ರಿಜೇಶ್​ ಚೌಟರನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ಲೋಕಸಭಾ ಚುನಾವಣೆ ಮುಗಿದ ಮೇಲೆ ‘ಮೇ’ ನಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ತಯರಾಗಿ ಎಂದು ಪದಾಧಿಕಾರಿಗಳ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಸೂಚನೆ‌ ನೀಡಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ್, ‘ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತದೆ. ಈ ಬಗ್ಗೆ ನಮಗೆ ಅತ್ಯಂತ ಸ್ಪಷ್ಟ ವಿಶ್ವಾಸವಿದೆ ಎಂದಿದ್ದಾರೆ.

ಇನ್ನು ಇದೇ ವೇಳೆ ಶಿವಮೊಗ್ಗದಿಂದ ಕೆ.ಎಸ್​​.ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ವಿಚಾರ , ‘ಈಶ್ವರಪ್ಪ ಜೊತೆ ಮಾತುಕತೆ ಮಾಡುತ್ತಿದ್ದು, ಎಲ್ಲವೂ ಸರಿಹೋಗುತ್ತದೆ. ಜಿಲ್ಲೆಯಲ್ಲಿ ಒಂದು ರಾಜಕೀಯ ಪಾರ್ಟಿಗಳಲ್ಲಿ ಇರುವ ಸಮಸ್ಯೆ ಇದೆ. ವಿಧಾನಸಭಾ ಕ್ಷೇತ್ರದಲ್ಲಿ ಹತ್ತಕ್ಕೂ ಹೆಚ್ಚು ಸಮರ್ಥ ನಾಯಕರಿದ್ದಾರೆ. ಆದ್ದರಿಂದ ನಮ್ಮಲ್ಲಿ ನಾಯಕತ್ವದ ಗೊಂದಲ ಇದೆ. ಭಾರತಮಾತೆ ಹಾಗೂ ಮೋದಿಗಾಗಿ ಈ ಗೊಂದಲವೆಲ್ಲವನ್ನು ಬದಿಗಿಟ್ಟು ಕೆಲಸ ಮಾಡುತ್ತಾರೆ. ನನಗೆ ಕೇರಳದ ಚುನಾವಣೆ ಕೂಡ ನೋಡಿಕೊಳ್ಳಿ ಎಂದು ಹೇಳಿದ್ದಾರೆ. ಆದರೆ, ನನ್ನ ಕ್ಷೇತ್ರಕ್ಕೆ ನಾನು ಹೆಚ್ಚು ಸಮಯ ನೀಡುತ್ತೇನೆ ಎಂದು ಹೇಳಿದರು.

ಬಿಜೆಪಿ ವರಿಷ್ಠರ ಸಂಧಾನ ವಿಫಲ ;ಈಶ್ವರಪ್ಪ, ಸ್ವತಂತ್ರ ಸ್ಪರ್ಧೆ ಖಚಿತ!

ಶಿವಮೊಗ್ಗ: ಪುತ್ರ ಕೆ.ಇ.ಕಾಂತೇಶ್’ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡು ಬಂಡಾಯದ ಬಾವುಟ ಹಾರಿಸಿರುವ ಈಶ್ವರಪ್ಪ ಅವರ ಕೋಪ ಶಮನಕ್ಕೆ ಬಿಜೆಪಿ ವರಿಷ್ಠರು ನಡೆಸಿದ ಸಂಧಾನ ಮಾತುಕತೆ ವಿಫಲಗೊಂಡಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಧಾಮೋಹನ್ ಅಗರ್ವಾಲ್ ಹಾಗೂ ರಾಜ್ಯ ನಾಯಕರು ಭಾನುವಾರ ಈಶ್ವರಪ್ಪ ಮನೆಗೆ ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರಾದರೂ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ತಮ್ಮ ಪಟ್ಟನ್ನು ಸಡಿಲಿಸಲಿಲ್ಲ. ಇದರಿಂದಾಗಿ ವರಿಷ್ಠರು ಬರಿಗೈಯಲ್ಲಿ ವಾಪಸ್ ತೆರಳಿದರು.

ಭಾನಿವಾರ ಬೆಳಿಗ್ಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಡಿ.ಎಸ್. ಅರುಣ್ ಹಾಗೂ ಇತರ ನಾಯಕರು ಶಿವಮೊಗ್ಗದ ಮಲ್ಲೇಶ್ವರ ನಗರದ ಈಶ್ವರಪ್ಪ ಮನೆಗೆ ಭೇಟಿ ನೀಡಿ, ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸೋಮವಾರ ನಡೆಯುವ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದರು.

ಆದರೆ, ತಾವು ಬಂಡಾಯದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಈಶ್ವರಪ್ಪ ಅವರು ಖಡಕ್ ಸಂದೇಶ ರವಾನಿಸಿದರು. ರಾಜ್ಯ ನಾಯಕರ ಮಾತುಕತೆ ವಿಫಲವಾದ ಬಳಿಕ, ಮಧ್ಯಾಹ್ನ ಸ್ವತಃ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಧಾಮೋಹನ್ ಅಗರ್ವಾಲ್ ಈಶ್ವರಪ್ಪ ಮನೆಗೆ ಭೇಟಿ ನೀಡಿದರು. ಆದರೆ, ಬೇರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾತುಕತೆಯ ಮಧ್ಯದಲ್ಲಿಯೇ ಈಶ್ವರಪ್ಪ ಸಭೆಯಿಂದ ಹೊರಹೋದರು. ಇದರ ಪರಿಣಾಮ ಸಂಧಾನ ಯಶಸ್ವಿಯಾಗಲಿಲ್ಲ. ಬಳಿಕ ಮಧ್ಯಾಹ್ನ 1.30ರವರೆಗೆ ಈಶ್ವರಪ್ಪ ಅವರಿಗಾಗಿ ಕಾದು ಕುಳಿದ ಕೇಂದ್ರ ನಾಯಕರ ನಿಯೋಗ, ಬಳಿಕ ಮನೆಯಿಂದ ವಾಪಸ್ಸಾಯಿತು.

ಈ ನಡುವೆ ಹೇಳಿಕೆ ನೀಡಿರುವ ಈಶ್ವರಪ್ಪ ಅವರು, ಪ್ರಧಾನಿ ಮೋದಿ ನನ್ನ ದೇವರು. ಪ್ರಾಣ ಹೋದರೂ ಅವರ ಹೆಸರು ಹೇಳುವುದನ್ನು ಬಿಡುವುದಿಲ್ಲ. ಆದರೆ, ಕುಟುಂಬವೊಂದರ (ಯಡಿಯೂರಪ್ಪ) ಕಪಿಮುಷ್ಟಿಯಿಂದ ಪಕ್ಷವನ್ನು ಬಿಡುಗಡೆಗೊಳಿಸಬೇಕು ಎನ್ನುವ ಉದ್ದೇಶದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಗೆದ್ದ ಬಳಿಕ ಮೋದಿ ಬಳಿ ಹೋಗುವೆ. ಮೋದಿ ಅವರ ಸಮಾವೇಶದಲ್ಲಿ ಭಾಗವಹಿಸದಿರುವ ಬಗ್ಗೆ ದುಃಖವಿದೆ ಎಂದು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ