ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಶ್ವಕಪ್ ಫೈನಲ್‌ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ..!

Twitter
Facebook
LinkedIn
WhatsApp
ವಿಶ್ವಕಪ್ ಫೈನಲ್‌ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ..!

ರೋಚಕ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಟೀಂ ಇಂಡಿಯಾ (India Vs New Zealand) ನಾಲ್ಕನೇ ಬಾರಿಗೆ ವಿಶ್ವಕಪ್ (ICC World Cup 2023) ಫೈನಲ್ ತಲುಪಿದೆ. ಇದೀಗ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಎದುರಿಸಲು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ (India Vs Australia) ಕೂಡ ಅಧಿಕೃತ ಟಿಕೆಟ್ ಪಡೆದುಕೊಂಡಿದೆ. ಉಭಯ ತಂಡಗಳ ಈ ಹೈವೋಲ್ಟೇಜ್ ಕದನಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನ ಆತಿಥ್ಯವಹಿಸುತ್ತಿದೆ.

ವಿಶ್ವದ ಅತ್ಯಂತ ದೊಡ್ಡ ಮೈದಾನದಲ್ಲಿ ಈ ಫೈನಲ್ ಪಂದ್ಯ ನಡೆಯುತ್ತಿರುವುದರಿಂದ ಇಡೀ ಕ್ರೀಡಾಂಗಣವೇ ಪ್ರೇಕ್ಷಕರಿಂದ ತುಂಬಿ ತುಳುಕುವುದು ಖಚಿತ. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ವಿಶ್ವಕಪ್ ಫೈನಲ್‌ ಪಂದ್ಯವನ್ನು ವೀಕ್ಷಿಸಲು ದೇಶದ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅಹಮದಾಬಾದ್‌ಗೆ ಆಗಮಿಸುವ ಸಾಧ್ಯತೆ ಇದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 70 ರನ್‌ಗಳಿಂದ ಸೋಲಿಸುವ ಮೂಲಕ ಭಾರತ ತಂಡ ಫೈನಲ್‌ಗೆ ಟಿಕೆಟ್ ಗಿಟ್ಟಿಸಿಕೊಂಡಿದೆ. ಟೂರ್ನಿಯ ಅಂತಿಮ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇದೇ ಭಾನುವಾರ, ನವೆಂಬರ್ 19 ರಂದು ನಡೆಯಲಿದೆ.

ಮೋದಿ ತವರಿನಲ್ಲಿ ಫೈನಲ್

ದೈನಿಕ್ ಜಾಗರಣ್ ವರದಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಿಶ್ವಕಪ್‌ನ ಪ್ರಶಸ್ತಿ ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ. ಹಾಗೆಯೇ ಇದೇ ವೇಳೆ ವಿಶ್ವಕಪ್‌ನ ಸಮಾರೋಪ ಸಮಾರಂಭವೂ ಅದ್ಧೂರಿಯಾಗಿ ನಡೆಯಲಿದ್ದು, ಬಾಲಿವುಡ್​ನ ಖ್ಯಾತ ತಾರೆಯರು ಅಭಿಮಾನಿಗಳನ್ನು ರಂಜಿಸಲಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಪ್ರಧಾನಿ ಮೋದಿ ಆಗಮನದ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ತವರು ನೆಲದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿರುವುದರಿಂದ ಪ್ರಧಾನಿ ಮೋದಿ ಅವರು ಈ ಪಂದ್ಯಕ್ಕೆ ಉಪಸ್ಥಿತರಾಗುವ ಸಾಧ್ಯತೆಗಳು ಹೆಚ್ಚಿವೆ.

ಕೊಹ್ಲಿ ಸಾಧನೆಗೆ ಪ್ರಧಾನಿ ಮೆಚ್ಚುಗೆ

ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ 50ನೇ ಶತಕ ಸಿಡಿಸಿದಲ್ಲದೆ ಈ ದಾಖಲೆ ಮಾಡಿದ ವಿಶ್ವದ ಮೊದಲ ಬ್ಯಾಟರ್ ಕೂಡ ಎನಿಸಿಕೊಂಡರು. ಕೊಹ್ಲಿಯ ಈ ಐತಿಹಾಸಿಕ ಸಾಧನೆಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಅವರು, ‘ಇಂದು ವಿರಾಟ್ ಕೊಹ್ಲಿ ತಮ್ಮ 50 ನೇ ಏಕದಿನ ಶತಕವನ್ನು ಬಾರಿಸಿದ್ದು ಮಾತ್ರವಲ್ಲದೆ, ಅತ್ಯುತ್ತಮ ಕ್ರೀಡಾ ಮನೋಭಾವವನ್ನು ವ್ಯಾಖ್ಯಾನಿಸುವ ಶ್ರೇಷ್ಠತೆ ಮತ್ತು ಪರಿಶ್ರಮದ ಮನೋಭಾವವನ್ನು ಸಹ ಪ್ರದರ್ಶಿಸಿದ್ದಾರೆ. ಈ ಗಮನಾರ್ಹ ಸಾಧನೆಯು ಅವರ ನಿರಂತರ ಸಮರ್ಪಣೆ ಮತ್ತು ಅಸಾಮಾನ್ಯ ಪ್ರತಿಭೆಗೆ ಸಾಕ್ಷಿಯಾಗಿದೆ. ನಾನು ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist