ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಜಾಮೀನು ; ಕೋರ್ಟ್ ಷರತ್ತುಗಳೇನು?

Twitter
Facebook
LinkedIn
WhatsApp
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಆರೋಪಿಗಳಿಗೆ ಜಾಮೀನು ; ಕೋರ್ಟ್ ಷರತ್ತುಗಳೇನು?

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಗಂಭೀರ ಆರೋಪ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದವರು ಎರಡು ವಾರದಲ್ಲಿ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ನಗರದ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್ (ಎಸಿಎಂಎಂ) ಪ್ರಕರಣದಲ್ಲಿ ಬಂಧಿತ ಮೂವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಬಂಧಿತರಾದ ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌.ಮುನಾವರ್ ಅಹ್ಮದ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 39ನೇ ಎಸಿಎಂಎಂ ನ್ಯಾಯಾಲಯದ ಪುರಸ್ಕರಿಸಿದೆ

‘ಆರೋಪಿಗಳು 1 ಲಕ್ಷ ಮೊತ್ತದ ಮುಚ್ಚಳಿಕೆ ನೀಡಬೇಕು, ಇಬ್ಬರು ವ್ಯಕ್ತಿಗಳು ಜಾಮೀನು ಒದಗಿಸಬೇಕು, ಆರೋಪಿಗಳು ಭಾರತ ಬಿಟ್ಟು ಹೋಗಬಾರದು, ವಿಚಾರಣಾ ನ್ಯಾಯಾಲಯದ ಮುದ್ದತುಗಳಿಗೆ ಹಾಜರಾಗಬೇಕು ಮತ್ತು ಇಂತಹ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಕೂಡದು’ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಆರೋಪಿಗಳ ಪರ ವಕೀಲರು ಮಂಡಿಸಿದ, ‘ಪೊಲೀಸರು ಪ್ರಕರಣ ದಾಖಲಿಸುವ ಮುನ್ನ ಪೂರ್ವಾನುಮತಿ ಪಡೆದಿಲ್ಲ. ಆರೋಪಿಗಳಿಗೆ ಸಿಆರ್‌ಪಿಸಿ ಕಲಂ 41ರ ಅನ್ವಯ ನೋಟಿಸ್‌ ನೀಡಿಲ್ಲ. ಅಂತೆಯೇ, ಆರೋಪಿಸಲಾದ ಘೋಷಣೆಯ ಮಾದರಿಯನ್ನು ಧ್ವನಿ ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಗಾಗಿ, ಇದು ಮೇಲ್ನೋಟಕ್ಕೆ ಸಾಕ್ಷ್ಯವೇ ಇಲ್ಲದ ಪ್ರಕರಣ ಎಂಬುದು ಸಾಬೀತಾಗುತ್ತದೆ’ ಎಂಬ ಅಂಶಗಳನ್ನು ಪರಿಗಣಿಸಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ ಏನು..?  ಕಳೆದ ತಿಂಗಳ 27ರಂದು ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಗೆ ಮತದಾನ ನಡೆದಿತ್ತು. ಫಲಿತಾಂಶ ಪ್ರಕಟವಾದ ಬಳಿಕ, ವಿಜೇತ ಅಭ್ಯರ್ಥಿ ನಾಸಿರ್‌ ಹುಸೇನ್‌ ಪರ ಸಂಭ್ರಮಾಚರಿಸುವ ವೇಳೆ ಆರೋಪಿಗಳು ಪಾಕಿಸ್ತಾನ್ ಪರ ಎಂಬ ಘೋಷಣೆ ಕೂಗಿದ್ದಾರೆ ಎಂದು ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಪ್ರತಿಪಕ್ಷ ಬಿಜೆಪಿ ಸದನದ ಒಳಗೆ ಹೊರೆಗೆ ಭಾರಿ ಹೋರಾಟ ಮಾಡಿದ ನಂತರ ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ದೃಢಪಟ್ಟ ನಂತರ ಮೂವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist