ಶನಿವಾರ, ಸೆಪ್ಟೆಂಬರ್ 30, 2023
ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳು ವರ್ಗಾವಣೆ-ಸಲಾರ್ ಚಿತ್ರದ ನಂತರ ಅಧಿಕೃತವಾಗಿ ‘ಕೆಜಿಎಫ್ 3’ ಘೋಷಣೆ ಮಾಡಿದ ಹೊಂಬಾಳೆ ಫಿಲ್ಮ್ಸ್..!-Bank strike: ದೇಶಾದ್ಯಂತ ಬ್ಯಾಂಕ್ ಮುಷ್ಕರ ; ಡಿಸೆಂಬರ್- ಜನವರಿಯಲ್ಲಿ 13 ದಿನ ಬ್ಯಾಂಕುಗಳು ಬಂದ್!-ತಮಿಳು ನಟ ಸಿದ್ದಾರ್ಥ್ ಚಿಕ್ಕು ಚಿತ್ರದ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ ; ಕ್ಷಮೆ ಕೋರಿದ ಪ್ರಕಾಶ್ ರಾಜ್-KPSC ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆ ಸೆ.30 ಕೊನೆಯ ದಿನ-ಹಾಲಿವುಡ್ ನ ಖ್ಯಾತ ನಟ, ಹ್ಯಾರಿ ಪಾಟರ್ ನಲ್ಲಿ ಹೆಡ್ ಮಾಸ್ಟರ್ ಪಾತ್ರ ಮಾಡಿದ್ದ ಮೈಕಲ್ ಗ್ಯಾಂಬೋನ್ ನಿಧನ..!-ಇಂಜಿನ್ ತಾಂತ್ರಿಕ ದೋಷದಿಂದ ಸಮುದ್ರದ ಮಧ್ಯೆ ಸಿಲುಕಿಕೊಂಡ 10 ಮೀನುಗಾರನ್ನು ರಕ್ಷಿಸಿದ ಮಂಗಳೂರು ಕೋಸ್ಟ್ ಗಾರ್ಡ್!-21 ವರ್ಷದ ಗರ್ಭಿಣಿ ಮಹಿಳೆಯನ್ನು ಕಾಡಿಗೆ ಕರೆದೊಯ್ದು ಬೆಂಕಿ ಹಚ್ಚಿದ ಸಹೋದರ, ತಾಯಿ!-ಕರಾವಳಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ - ಆರೆಂಜ್ ಅಲರ್ಟ್ ಘೋಷಣೆ-ಮಂಗಳೂರು: ಇಂದಿನ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ಸಿಗದ ಬೆಂಬಲ ;ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ

Twitter
Facebook
LinkedIn
WhatsApp
Untitled 27

ದೆಹಲಿ: ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ(ಡಬ್ಲ್ಯುಎಫ್‌ಐ) ಮುಖ್ಯಸ್ಥ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್ ಭೂಷಣ್ ಸಿಂಗ್​ ವಿರುದ್ಧ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಆರೋಪವನ್ನು ಮಾಡಿ ಈತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದ ಅನೇಕ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಸರ್ಕಾರವು ತಮ್ಮ ಆತನ ವಿರುದ್ದ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮತ್ತು ತಮಗೆ ನ್ಯಾಯ ದೊರಕಿಸದ ಕಾರಣದಿಂದ ಬೇಸತ್ತಿದ್ದು ತಮಗೆ ಬಂದಿರುವ ಪದಕಗಳನ್ನು ಸಂಜೆ 6 ಗಂಟೆಗೆ ಹರಿದ್ವಾರದ ಬಳಿ ಗಂಗಾ ನದಿಗೆ ಎಸೆಯವುದಾಗಿ ಹೇಳಿದ್ದಾರೆ. ಅಲ್ಲದೇ, ಇಂಡಿಯಾ ಗೇಟ್‌ನಲ್ಲಿ ಆಮರಣಾಂತ ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ನೂತನ ಸಂಸತ್ ಭವನದತ್ತ ತೆರಳಿ ಪ್ರತಿಭಟನೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡು ಬಿಡುಗಡೆ ಮಾಡಿದ್ದರು.

ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಕುಸ್ತಿಪಟುಗಳು, ಡಬ್ಲ್ಯುಎಫ್‌ಐ ಅಧ್ಯಕ್ಷನ ವಿರುದ್ಧ ಆರೋಪಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ