ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

PSL: ಟಿ20 ಕ್ರಿಕೆಟ್‌ನಲ್ಲಿ ಬರೋಬ್ಬರಿ 515 ರನ್, ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆ-ನೂತನ ವಿಶ್ವ ದಾಖಲೆ

Twitter
Facebook
LinkedIn
WhatsApp
PSL: ಟಿ20 ಕ್ರಿಕೆಟ್‌ನಲ್ಲಿ ಬರೋಬ್ಬರಿ 515 ರನ್, ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆ-ನೂತನ ವಿಶ್ವ ದಾಖಲೆ

ಪ್ರಸ್ತುತ ಪಾಕಿಸ್ತಾನದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ (Pakistan Super League)ಟಿ20 ಕ್ರಿಕೆಟ್‌ನ ಎಲ್ಲಾ ದಾಖಲೆಗಳು ಉಡೀಸ್ ಆಗಿವೆ. ಮಾ.11 ರಂದು ನಡೆದ ಮುಲ್ತಾನ್ ಸುಲ್ತಾನ್ಸ್ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ (Multan Sultans and Quetta Gladiators) ತಂಡಗಳ ನಡುವಿನ ಪಂದ್ಯದಲ್ಲಿ ಒಟ್ಟು 515 ರನ್ ದಾಖಲಾಗಿದ್ದು, ಇದು ಟಿ20 ಕ್ರಿಕೆಟ್‌ನ (T20 cricket) ನೂತನ ವಿಶ್ವ ದಾಖಲೆಯಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳಿಂದಲೂ ಬೌಂಡರಿ ಹಾಗೂ ಸಿಕ್ಸರ್‌ಗಳ ಮಳೆಯೇ ಸುರಿಯಿತು. ಈ ಪಂದ್ಯದಲ್ಲಿ ಒಟ್ಟು 45 ಬೌಂಡರಿ ಹಾಗೂ 33 ಸಿಕ್ಸರ್‌ಗಳು ದಾಖಲಾದವು.

ಪಂದ್ಯದ ಕುರಿತು ಮಾತನಾಡುವುದಾದರೆ, ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 262 ರನ್ ಗಳಿಸಿತು. ತಂಡದ ಪರ ಬಿರುಸಿನ ಬ್ಯಾಟಿಂಗ್ ಮಾಡಿದ ಉಸ್ಮಾನ್ ಖಾನ್ 43 ಎಸೆತಗಳಲ್ಲಿ 120 ರನ್ ಬಾರಿಸಿದರು. ಅಲ್ಲದೆ ಕೇವಲ 36 ಎಸೆತಗಳಲ್ಲಿ 100 ರನ್ ಪೂರೈಸುವ ಮೂಲಕ ಪಿಎಸ್ಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಬಾರಿಸಿದ ದಾಖಲೆ ಕೂಡ ಮಾಡಿದರು. ಇವರ ಹೊರತಾಗಿ ಮೊಹಮ್ಮದ್ ರಿಜ್ವಾನ್ 29 ಎಸೆತಗಳಲ್ಲಿ 55 ರನ್ ಚಚ್ಚಿದರು.

ಈ ಗುರಿ ಬೆನ್ನಟ್ಟಿದ ಗ್ಲಾಡಿಯೇಟರ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 253 ರನ್ ಗಳಿಸಲಷ್ಟೇ ಶಕ್ತವಾಯಿತು.  ಗ್ಲಾಡಿಯೇಟರ್ಸ್ ಪರ ಉಮರ್ ಯೂಸುಫ್ 67 ರನ್ ಮತ್ತು ಇಫ್ತಿಕರ್ ಅಹ್ಮದ್ 31 ಎಸೆತಗಳಲ್ಲಿ 53 ರನ್ ಬಾರಿಸಿದರು. ಇನ್ನು ಅಬ್ಬಾಸ್ ಅಫ್ರಿದಿ 47 ರನ್​ ನೀಡಿ 5 ವಿಕೆಟ್ ಕಬಳಿಸಿ ಮುಲ್ತಾನ್ ತಂಡದ 9 ರನ್ ಗೆಲುವಿಗೆ ಕಾರಣರಾದರು. ಇದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

2 ಓವರ್- 54 ರನ್; 36 ಎಸೆತಗಳಲ್ಲಿ ಶತಕ- ಹೊಸ  ದಾಖಲೆ 

ಸುಮಾರು ಒಂದು ತಿಂಗಳ ಹಿಂದೆ ಪಿಎಸ್​ಎಲ್​ನಲ್ಲಿ ಏಕೈಕ ಪಂದ್ಯವನ್ನಾಡಿದ್ದ ಉಸ್ಮಾನ್, ಈಗ ಭರ್ಜರಿ ಶತಕದೊಂದಿಗೆ ತಂಡಕ್ಕೆ ಭರ್ಜರಿ ಪುನರಾಗಮನ ಮಾಡಿದ್ದಾರೆ. ಕ್ವೆಟ್ಟಾ ಗ್ಲಾಡಿಯೇಟರ್ಸ್ ವಿರುದ್ಧದ ಪಂದ್ಯದಲ್ಲಿ ಉಸ್ಮಾನ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ನಂತರ ಮತ್ತಷ್ಟು ಅಬ್ಬರಿಸಿದ ಉಸ್ಮಾನ್, ಮುಂದಿನ 14 ಎಸೆತಗಳಲ್ಲಿ 50 ರನ್ ಗಳಿಸಿದರು. ಈ ಮೂಲಕ ಉಸ್ಮಾನ್ ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿ ಪಿಎಸ್​ಎಲ್​ನಲ್ಲಿ ಅತಿ ವೇಗದ ಶತಕ ದಾಖಲಿಸಿದ ದಾಖಲೆ ಬರೆದರು.

ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ ಉಸ್ಮಾನ್ 11 ಬೌಂಡರಿ ಮತ್ತು 7 ಭರ್ಜರಿ ಸಿಕ್ಸರ್‌ಗಳನ್ನು ಬಾರಿಸಿದರು. ಅಂದರೆ ಕೇವಲ ಬೌಂಡರಿಗಳಿಂದಲೇ ಉಸ್ಮಾನ್ 86 ರನ್ ಕಲೆಹಾಕಿದರು. ಅದರಲ್ಲೂ ಎದುರಾಳಿ ತಂಡದ ಬೌಲರ್ ಕೈಸ್ ಅಹ್ಮದ್ ಅವರನ್ನು ಗುರಿಯಾಗಿಸಿಕೊಂಡ ಉಸ್ಮಾನ್ ಮೊದಲ ಓವರ್​ನಲ್ಲಿ 27 ರನ್ ಬಾರಿಸಿದರೆ, ಈ ಬೌಲರ್​ನ ಎರಡನೇ ಓವರ್​ನಲ್ಲಿ ಮತ್ತೆ 27 ರನ್ ಚಚ್ಚಿದರು. ಹೀಗಾಗಿ ಉಸ್ಮಾನ್ ಕೇವಲ 2 ಓವರ್‌ಗಳಲ್ಲಿಯೇ 54 ರನ್ ಕಲೆ ಹಾಕಿದರು.

ಉಸ್ಮಾನ್ ಅವರ ಈ ಸ್ಫೋಟಕ ಇನ್ನಿಂಗ್ಸ್ ಆಧಾರದ ಮೇಲೆ, ಮುಲ್ತಾನ್ ತಂಡ ಕೇವಲ 10 ಓವರ್‌ಗಳಲ್ಲಿ 156 ರನ್ ಗಳಿಸಿತು. ಅಂತಿಮವಾಗಿ, 11ನೇ ಓವರ್‌ನ ಮೊದಲ ಎಸೆತದಲ್ಲಿ ಉಸ್ಮಾನ್ ಸ್ಟಂಪ್ ಔಟ್ ಆಗುವ ಮೂಲಕ ತಮ್ಮ ಇನ್ನಿಂಗ್ಸ್​ಗೆ ಅಂತ್ಯ ಹಾಡಿದರು. ಉಸ್ಮಾನ್ ತಮ್ಮ 43 ಎಸೆತಗಳ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 9 ಸಿಕ್ಸರ್‌ಗಳನ್ನು ಒಳಗೊಂಡಂತೆ 120 ರನ್ ಸಿಡಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist