ಗುರುವಾರ, ಮೇ 2, 2024
ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!-ರಾಜ್ಯದ ಕೆಲ ಜಿಲ್ಲೆಗಳಲ್ಲಿ ಏರಲಿದೆ ಗರಿಷ್ಠ ತಾಪಮಾನ; ರೆಡ್ ಅಲರ್ಟ್ ಘೋಷಣೆ.!-ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಜೆಪಿ ಜೊತೆ ಸೇರಲು ಸಜ್ಜಾದ ಪುತ್ತಿಲ ಪರಿವಾರ ; ಎಲ್ಲಾ ಮಾತುಕತೆಗೆ ಒಪ್ಪಿಗೆ ಸೂಚನೆ?

Twitter
Facebook
LinkedIn
WhatsApp
ಬಿಜೆಪಿ ಜೊತೆ ಸೇರಲು ಸಜ್ಜಾದ ಪುತ್ತಿಲ ಪರಿವಾರ ; ಎಲ್ಲಾ ಮಾತುಕತೆಗೆ ಒಪ್ಪಿಗೆ ಸೂಚನೆ?

ಪುತ್ತೂರು : ರಾಜ್ಯದ ರಾಜಕೀಯದಲ್ಲೇ  ಸಂಚಲನ ಸೃಷ್ಟಿಸಿ  ಬಿಜೆಪಿಗೆ ತಲೆನೋವು ತಂದಿದ್ದ ಪುತ್ತೂರಿನ ‘ಪುತ್ತಿಲ ಪರಿವಾರ’ ವನ್ನು ಮತ್ತೆ ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸುವುದು ಬಹುತೇಕ ಖಚಿತವಾಗಿದೆ.

ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡ್ಯೂರಪ್ಪ ಅರುಣ್ ಕುಮಾರ್ ಪುತ್ತಿಲ ಜೊತೆ ನಡೆಸಿದ್ದ ಮಾತುಕತೆ ಫಲಪ್ರಧವಾಗಿದೆ ಎನ್ನಲಾಗಿದ್ದು ಪುತ್ತಿಲಗೆ ಸೂಕ್ತ ಸ್ಥಾನ ಮಾನ ನೀಡುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದೆ ಪುತ್ತೂರಿನಲ್ಲಿ ಸಭೆ ಸೇರಿದ್ದ ಪುತ್ತಿಲ ಪರಿವಾರ ಬಿಜೆಪಿ ಜತೆ ವಿಲೀನಕ್ಕೆ ಕೆಲ ಶರತ್ತುಗಳನ್ನು ವಿಧಿಸಿತ್ತು. ಜತೆಗೆ ಮೂರು ದಿನಗಳ ಗಡುವನ್ನು ವಿಧಿಸಲಾಗಿತ್ತು. ಆ ಗಡವು ಗುರುವಾರ ಮುಗಿಯುವುದರೊಳಗೆ ಶುಭ ಸುದ್ದಿಯನ್ನು ಬಿಜೆಪಿ ಹೈಕಮಾಂಡ್‌ ಪುತ್ತಿಲ ಪರಿವಾರಕ್ಕೆ ನೀಡಿದೆ ಎನ್ನಲಾಗಿದ್ದು ಬಿಎಸ್‌ ವೈ ಮಾತಿಗೆ ಪುತ್ತಿಲ ಪರಿವಾರ ಕೂಡ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಅರುಣ್ ಪುತ್ತಿಲ ಭೇಟಿಯಾಗಲಿದ್ದಾರೆ . ಪುತ್ತಿಲ ಪರಿವಾರ ಬಿಜೆಪಿಯಲ್ಲಿ ವಿಲೀನವಾಗುವ ಮಾಹಿತಿಯನ್ನು ಜಿಲ್ಲಾಧ್ಯಕ್ಷರು ಅಧಿಕೃತವಾಗಿ ಶುಕ್ರವಾರ ಪ್ರಕಟಿಸುವ ಸಾಧ್ಯತೆಯಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ