ಪುತ್ತೂರು : ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ; ಶಾಲಾ ಶಿಕ್ಷಕಿ ಸಾವು.!
ಪುತ್ತೂರು ಅಕ್ಟೋಬರ್ 28 : ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಪತ್ನಿ ಅನಿತಾ(35) ಎಂದು ಗುರುತಿಸಲಾಗಿದೆ. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ಅನಿತಾ ಕೆಲ ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಇಂದು ಬೆಳಿಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುವ ವೇಳೆ ಕಬಕ ಸಮೀಪ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಸಣ್ಣ ಪುಟ್ಟ ಗಾಯವಾಗಿದ್ದು, ಸುರೇಶ್ ಕುಲಾಲ್ ಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.