ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ; ಆರೋಪಿಗಳು ಠಾಣೆಗೆ ಶರಣು!

Twitter
Facebook
LinkedIn
WhatsApp
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ; ಆರೋಪಿಗಳು ಠಾಣೆಗೆ ಶರಣು!

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಹರು ನಗರ ಜಂಕ್ಷನ್​ನಲ್ಲಿ ಹುಲಿವೇಷ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥನನ್ನು ಬರ್ಬರವಾಗಿ ಹತ್ಯೆ  ಮಾಡಲಾಗಿದೆ. ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ (26) ಹತ್ಯೆಯಾದ ಯುವಕ. ಕೊಲೆ ನಂತರ ಮೂವರು ಆರೋಪಿಗಳ ಪೈಕಿ ಇಬ್ಬರು ಆರೋಪಿಗಳು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ಬನ್ನೂರು ನಿವಾಸಿ ಮನೀಷ್, ಚೇತು ಬಂಧಿತ ಆರೋಪಿಗಳಾಗಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತ ವಿಚಾರದಲ್ಲಿ ಎರಡು ಸಾವಿರ ನೀಡುವ ಬಗ್ಗೆ ಮಾತುಕತೆ ನಡೆದಿದೆ.

ಈ ವೇಳೆ ಬಸ್ ಚಾಲಕ ಚೇತು ಎಂಬಾತನ ಬೆಂಬಲಿಗ ಹಾಗೂ ಅಕ್ಷಯ್ ನಡುವೆ ತೀವ್ರ ವಾಗ್ವಾದ ನಡೆದಿದೆ. ಹೀಗೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಕೊನೆಗೆ ಮೂರಕ್ಕೂ ಅಧಿಕ ಮಂದಿಯ ತಂಡವು ಮಾಣಿ ಮೈಸೂರು ಹೆದ್ದಾರಿಯ ನೆಹರು ನಗರ ಜಂಕ್ಷನ್​ನಲ್ಲಿ ಅಕ್ಷಯ್​ನನ್ನ ಅಟ್ಟಾಡಿಸಿ ತಲವಾರಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಅಕ್ಷಯ್ ಹತ್ಯೆ ಬಳಿಕ ಮನೀಷ್ ಮತ್ತು ಚೇತು ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಠಾಣಾ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೆ ಬೇರೆ ಕಾರಣಗಳು ಇದೆಯಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಾಗುತ್ತಿದೆ. ಹುಲಿಕುಣಿತದಲ್ಲಿ ಕಲ್ಲೇಗ ಟೈಗರ್ಸ್ ತಂಡದ ನೇತೃತ್ವವನ್ನು ಅಕ್ಷಯ್ ವಹಿಸಿಕೊಂಡಿದ್ದನು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ