ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರಶೇಖರ ಭಟ್ (62) ಎಂಬವರೇ ಒಟಿಪಿ ನೀಡಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿ. ಮಂಗಳವಾರ (ಫೆ 6) ಚಂದ್ರಶೇಖರ ಭಟ್ ಅವರ ಮೊಬೈಲಿಗೆ ಕೆವೈಸಿ ಅಪ್ಡೇಟ್ ಮಾಡುವ ಕುರಿತು ಸಂದೇಶ ಬಂದಿದ್ದು, ಸಂದೇಶದಲ್ಲಿ ತಿಳಿಸಿದ ದೂರವಾಣಿ ಸಂಖ್ಯೆಗೆ ಅವರು ಕರೆ ಮಾಡಿದಾಗ ನಿಮ್ಮ ಖಾತೆ ಬ್ಲಾಕ್ ಆಗಿದೆ. ಒಟಿಪಿ ನೀಡುವಂತೆ ತಿಳಿಸಿದ ಮೇರೆಗೆ ಭಟ್ ಅವರು ಒಟಿಪಿ ನೀಡಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲೇ ಅವರ ಬ್ಯಾಂಕ್ ಖಾತೆಯಿಂದ 1.73 ಲಕ್ಷ ರೂಪಾಯಿ ಹಣ ಕಡಿತಗೊಂಡಿದೆ.ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ವಂಚಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 24-2024 ಕಲಂ: IPC 1860 ಕಲಂ-417,419,420 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ಲಕ್ಷಾಂತರ ರೂಪಾಯಿ ವಂಚನೆ...!
ಬಂಟ್ವಾಳ: ಚತುಷ್ಪತ ರಾ. ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲಿಸಿದ ಡಿಸಿ
ಬಿಸಿರೋಡಿನಿಂದ ಅಡ್ಡಹೊಳೆವರೆಗೆ ನಡೆಯುವ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ವೀಕ್ಷಣೆ ನಡೆಸಿದರು.ಈ ಸಂದರ್ಭದಲ್ಲಿ ಸಾರ್ವಜನಿಕರ ದೂರನ್ನು ಆಲಿಸಿದ ಅವರು ಕೆಲವೊಂದು ಪರಿಹಾರ ಕಾರ್ಯಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ರೈತ ಸಂಘ ಹಾಗೂ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬೆಳಿಗ್ಗೆ ಬಿಸಿರೋಡಿನಿಂದ ಗುಂಡ್ಯವರೆಗೆ ವೀಕ್ಷಿಸಲು ಅಧಿಕಾರಿಗಳ ಜೊತೆ ತೆರಳಿದರು.
ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರುವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಯನ್ನು ವೀಕ್ಷಣೆ ನಡೆಸಿದ ಬಳಿಕ ,ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿಯತ್ತ ತೆರಳಿದರು. ಮೆಲ್ಕಾರ್ ನಲ್ಲಿ ಗುಡ್ಡವನ್ನು ಅಗೆದ ಪರಿಣಾಮವಾಗಿ ಕೆಲವೊಂದು ಮನೆಗಳಿಗೆ ಹಾನಿಯಾಗುವ ಸಂಭವವು ಇರುವುದರಿಂದ ಮತ್ತು ಇನ್ನು ಕೆಲವು ಮನೆಗಳಿಗೆ ಸಂಪರ್ಕ ರಸ್ತೆ ಕಡಿತಗೊಂಡ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಬದಲಿ ವ್ಯವಸ್ಥೆ ಮಾಡಿಕೊಡುವ ಬಗ್ಗೆ ಚಿಂತನೆ ನಡೆಸುವ ಕುರಿತು ವಿಷಯ ಪ್ರಸ್ತಾಪ ಮಾಡಿದ್ದಲ್ಲದೆ,ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ. ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಯ ವೇಳೆ ದೂಳಿನ ಸಮಸ್ಯೆ ಉಂಟಾಗುತ್ತಿದ್ದು,ಸರಿಯಾಗಿ ನೀರು ಹಾಕುತ್ತಿಲ್ಲ ಎಂಬ ದೂರನ್ನು ಸಾರ್ವಜನಿಕ ರು ಜಿಲ್ಲಾಧಿಕಾರಿ ಅವರಲ್ಲಿ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ಇನ್ನು ಮುಂದೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ದೂರುಗಳು ಬರದ ರೀತಿಯಲ್ಲಿ ಸ್ಥಳೀಯ ಗ್ರಾ.ಪಂ.ನವರು ರಸ್ತೆ ನೀರು ಹಾಕುವ ಜವಾಬ್ದಾರಿ ವಹಿಸಬೇಕು ಎಂದು ತಹಶಿಲ್ದಾರ್ ಅವರಲ್ಲಿ ತಿಳಿಸಿದರು. ದೂಳಿನ ಸಮಸ್ಯೆಯಿಂದ ಕಲ್ಲಡ್ಕ ಪರಿಸರದ ಅನೇಕರಿಗೆ ಅಸ್ತಮಾ ,ಶ್ವಾಸಕೋಶದ ರೋಗ ಬಂದಿದ್ದು, ಈ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಅವರಲ್ಲಿ ಅಳಲು ತೋಡಿಕೊಂಡಿರು.
ಸಾರ್ವಜನಿಕರ ನೀಡುವ ದೂರಿಗೆ ಕಂಪೆನಿಯ ಕೆಲಸಗಾರರು ಕಿವಿಗೊಡುವುದಿಲ್ಲ ಎಂದು ಅವರು ಆರೋಪ ಮಾಡಿದರು. ಮುಂದೆ ಇಂತಹ ಯಾವುದೇ ಸಮಸ್ಯೆ ಗಳು ಉದ್ಭವವಾಗಂತೆ ತಹಶಿಲ್ದಾರ್ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು. ಕೆಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ವೇಳೆ ಕುಡಿಯುವ ನೀರಿನಪೈಪ್ ಗಳನ್ನು ತುಂಡರಿಸಲಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ , ಅಂತಹ ಕಡೆಗಳಲ್ಲಿ ಹೊಸ ಪೈಪ್ ಲೈನ್ ಅಳವಡಿಸಿ ಕುಡಿಯುವ ನೀರಿಗೆ ಯಾವುದೇ ಕುಂದುಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ನೀಡುವ ದೂರಿಗೆ ಕಂಪೆನಿಯ ಕೆಲಸಗಾರರು ಕಿವಿಗೊಡುವುದಿಲ್ಲ ಎಂದು ಅವರು ಆರೋಪ ಮಾಡಿದರು. ಮುಂದೆ ಇಂತಹ ಯಾವುದೇ ಸಮಸ್ಯೆ ಗಳು ಉದ್ಭವವಾಗಂತೆ ತಹಶಿಲ್ದಾರ್ ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅವರು ಸೂಚನೆ ನೀಡಿದರು. ಕೆಲವು ಕಡೆಗಳಲ್ಲಿ ರಸ್ತೆ ಕಾಮಗಾರಿ ವೇಳೆ ಕುಡಿಯುವ ನೀರಿನಪೈಪ್ ಗಳನ್ನು ತುಂಡರಿಸಲಾಗಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ , ಅಂತಹ ಕಡೆಗಳಲ್ಲಿ ಹೊಸ ಪೈಪ್ ಲೈನ್ ಅಳವಡಿಸಿ ಕುಡಿಯುವ ನೀರಿಗೆ ಯಾವುದೇ ಕುಂದುಬರದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.