ಪುತ್ತೂರು : ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಬರ್ಬರ ಕೊಲೆ...!

ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ : ಕಾರ್ಮಿಕ ಸಾವು
ಮಂಗಳೂರು : ಅಡಿಕೆ ತೆಗೆಯುವ ವೇಳೆ ಕರೆಂಟ್ ಶಾಕ್ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕಾಪು ತಾಲೂಕು ಕುರ್ಕಾಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಪವನ್ ಶ್ರವಣ್ ಸೇವಂತ್ ನತದೃಷ್ಟ ಯುವಕ. ಈತ ಕಬ್ಬಿಣದ ರಾಡ್ ಗೆ ಕತ್ತಿ ಕಟ್ಟಿ ಅಡಿಕೆ ತೆಗೆಯಲು ಮುಂದಾಗಿದ್ದ.ಈ ವೇಳೆ ವಿದ್ಯುತ್ ತಂತಿಗೆ ರಾಡ್ ತಗಲಿದೆ. ತಕ್ಷಣ ಕರೆಂಟ್ ಶಾಕ್ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತ ಮಹಾರಾಷ್ಟ್ರ ಮೂಲದ ಕಾರ್ಮಿಕನಾಗಿದ್ದು ಕೆಲವು ಸಮಯಗಳಿಂದ ಇಲ್ಲಿ ಕೆಲಸ ಮಾಡಿಕೊಂಡಿದ್ದ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.