ಪುತ್ತೂರು: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು...!
ಪುತ್ತೂರು: ನವವಿವಾಹಿತೆಯೊಬ್ಬರು ನೇಣು ಬಿಗಿದು ಪತಿ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ ನೇಣಿಗೆ ಶರಣಾದವರು.
ಶೋಭಾ ಅವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ರವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿಗೆ ಕಾರಣ ತನಿಖೆಯಿಂದ ತಿಳಿಯಬೇಕಾಗಿದೆ.
ಮಂಗಳೂರು: ಸಾರ್ವಜನಿಕ ರಸ್ತೆ ಬದಿಯಲ್ಲಿ ಗಾಂಜಾ ಮಾರಾಟ – ಇಬ್ಬರ ಬಂಧನ
ಕೇಂದ್ರ ಉಪ – ವಿಭಾಗ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಅತ್ತಾವರದ ಆದಿತ್ಯ ಕೆ (29), ಅಡ್ಯಾರ್ ಪದವು ನಿವಾಸಿ ರೋಹನ್ ಸಿಕ್ವೇರಾ (33) ಬಂಧಿತರು.
ಬಂಧಿತರಿಂದ ಸುಮಾರು ರೂ 50,000 ಮೌಲ್ಯದ 27 ಗ್ರಾಂ ಹೈಡೋವೀಡ್ ಗಾಂಜಾ, ಸುಮಾರು ರೂ 1,00,000 ಮೌಲ್ಯದ 2 ಕೆಜಿ 95 ಗ್ರಾಂನ ಗಾಂಜಾ, ರೂ. 8000 ಮೌಲ್ಯದ ಗಾಂಜಾ ಆಪ್ ಆಯಿಲ್, ರೂ,16,800 ಮೌಲ್ಯದ ಎಲ್.ಎಸ್.ಡಿ ಸ್ಟಾಂಫ್. ಡಿಜಿಟಲ್ ತೂಕ ಮಾಪನಗಳು-2, ಕೃತ್ಯಕ್ಕೆ ಬಳಸಿದ ರೂ 90,000 ಮೌಲ್ಯದ ಎರಡು ಮೊಬೈಲ್ ಫೋನ್ ಮತ್ತು ರೂ 20 ಲಕ್ಷ ಮೌಲ್ಯದ ಕಪ್ಪು ಬಣ್ಣದ ಹುಂಡೈ ಕಂಪೆನಿಯ ವರ್ನ ಮಾಡೆಲ್ ನ ಕಾರು- 1 ಮತ್ತು ಇತರ ಸೊತ್ತುಗಳನ್ನು ಸ್ವಾದೀನಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಎನ್ ಡಿ ಪಿ ಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿದೆ.
ಇನ್ನು ಕಾರ್ಯಾಚರಣೆಯನ್ನು ಮಂಗಳೂರು ನಗರ ಪೊಲೀಸ್ ನ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ರವರ ನಿರ್ದೇಶನದಂತೆ, ಸಿದ್ದಾರ್ಥ್ ಗೋಯಲ್ ಐ.ಪಿ.ಎಸ್ ಉಪ ಪೊಲೀಸ್ ಆಯುಕ್ತರು ( ಕಾನೂನು ಸುವ್ಯವಸ್ಥೆ), ದಿನೇಶ್ ಕುಮಾರ್ ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ) ರವರ ಮಾರ್ಗದರ್ಶನದಲ್ಲಿ, ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಪ್ರತಾಪ್ ಸಿಂಗ್ ತೋರಟ್ ರವರ ನೇತೃತ್ವದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಅಜ್ಜತ್ ಆಲಿ ಮತ್ತು ಆ್ಯಂಟಿ ಡ್ರಗ್ ತಂಡದ ಕೇಂದ್ರ ಉಪ ವಿಭಾಗದ ಅಧಿಕಾರಿ ಪಿಎಸ್ ಐ ಪ್ರದೀಪ್ ಟಿ ಆರ್ ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ.