ಪುತ್ತೂರು: ನೇಣಿಗೆ ಶರಣಾದ ಪಿಯುಸಿ ವಿಧ್ಯಾರ್ಥಿನಿ...!
Twitter
Facebook
LinkedIn
WhatsApp
ಪುತ್ತೂರು ಜನವರಿ 07: ಪ್ರಥಮ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಚಂದ್ರಶೇಖರ್ ಗೌಡ ದಂಪತಿಗಳ ಮಗಳು ದೀಕ್ಷಾ (16 ವರ್ಷ) ಆತ್ಮಹತ್ಯೆ ಮಾಡಿಕೊಂಡವರು.
ಪುತ್ತೂರು ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಸ ದೀಕ್ಷಾ ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ಮನೆಯಲ್ಲಿ ಒಬ್ಬಳೇ ಇದ್ದಳು. ಮನೆಯ ರೂಮಲ್ಲಿ ಫ್ಯಾನ್ ಗೆ ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.