R Ashwin: ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್ ದಾಖಲೆ ಮುರಿದ ಅಶ್ವಿನ್

ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯ (Test cricket) ಇಂದು ಮುಕ್ತಾಯಗೊಳ್ಳಲಿದೆ. ಪಂದ್ಯದಲ್ಲಿ ಹಿಡಿತ ಸಾಧಿಸಿರುವ ಭಾರತ (India), ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ.
R Ashwin: ಈಗಾಗಲೇ ವಿಂಡೀಸ್ ಬ್ಯಾಟರ್ಗಳ ವಿಕೆಟ್ ಬೇಟೆ ಆರಂಭಿಸಿದರು ರವಿಚಂದ್ರನ್ ಅಶ್ವಿನ್, ವಿಂಡೀಸ್ ಆರಂಭಿಕರನ್ನು ಪೆವಿಲಿಯನ್ಗಟ್ಟುವಲ್ಲಿ ಯಶ್ವಿಯಾಗಿದ್ದಾರೆ. ಇದರೊಂದಿಗೆ ವಿಂಡೀಸ್ ನೆಲದಲ್ಲಿ ಅವರ ವಿರುದ್ಧವೇ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ. ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಸರಣಿಯ 2 ನೇ ಟೆಸ್ಟ್‌ನ 4 ನೇ ದಿನದಂದು 2 ವಿಕೆಟ್ ಉರುಳಿಸಿದ ಅಶ್ವಿನ್, ಟೀಂ ಇಂಡಿಯಾದ ಮಾಜಿ ದಂತಕಥೆ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಇದುವರೆಗೆ ಒಟ್ಟು 13 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 77 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ. ಈ ಹಿಂದೆ 17 ಟೆಸ್ಟ್ ಪಂದ್ಯಗಳಲ್ಲಿ 74 ವಿಕೆಟ್ ಪಡೆದಿದ್ದ ಕನ್ನಡಿಗ ಅನಿಲ್ ಕುಂಬ್ಳೆ (Anil Kumble) ಹೆಸರಿನಲ್ಲಿ ಈ ದಾಖಲೆ ಇತ್ತು. ವಿಂಡೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ಗಳ ಪೈಕಿ 89 ವಿಕೆಟ್ಗಳೊಂದಿಗೆ ಕಪಿಲ್ ದೇವ್ (Kapildev) ಅಗ್ರಸ್ಥಾನದಲ್ಲಿದ್ದಾರೆ.
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್, ಇದುವರೆಗಿನ ಸರಣಿಯಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಒಟ್ಟು 12 ವಿಕೆಟ್ ಉರುಳಿಸಿದ್ದರು. ಎರಡನೇ ಟೆಸ್ಟ್‌ನಲ್ಲಿ ಇದುವರೆಗೆ ಮೂರು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ವಾಸ್ತವವಾಗಿ, ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಅರ್ಧಶತಕವನ್ನೂ ಬಾರಿಸಿದ್ದರು.
ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನಕ್ಕೇರಿದ ಅಶ್ವಿನ್ :
ಪೋರ್ಟ್ ಆಫ್ ಸ್ಪೇನ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 3 ವಿಕೆಟ್ ಕಬಳಿಸುವುದರೊಂದಿಗೆ ರವಿಚಂದ್ರ ಅಶ್ವಿನ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಹರ್ಭಜನ್ ಸಿಂಗ್ (Harbhajan Singh) ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.
ಭಾರತದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ಗಳ ಪಟ್ಟಿಯಲ್ಲಿ ರವಿಚಂದ್ರನ್ ಅಶ್ವಿನ್ 2ನೇ ಸ್ಥಾನಕ್ಕೇರಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಭಾರತೀಯ ಬೌಲರ್ಗಳ ಪಟ್ಟಿ ಈ ಕೆಳಗಿನಂತಿದೆ.
- ಅನಿಲ್ ಕುಂಬ್ಳೆ: ಟೀಮ್ ಇಂಡಿಯಾದ ಮಾಜಿ ನಾಯಕ ಅನಿಲ್ ಕುಂಬ್ಳೆ ಒಟ್ಟು 956 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ.
- ರವಿಚಂದ್ರನ್ ಅಶ್ವಿನ್: ಒಟ್ಟು 712 ವಿಕೆಟ್‌ಗಳನ್ನು ಕಬಳಿಸುವ ಮೂಲಕ ರವಿಚಂದ್ರನ್ ಅಶ್ವಿನ್ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ.
- ಹರ್ಭಜನ್ ಸಿಂಗ್: ಟರ್ಬನೇಟರ್ ಖ್ಯಾತಿಯ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಒಟ್ಟು 711 ವಿಕೆಟ್ ಕಬಳಿಸಿದ್ದಾರೆ.
- ಕಪಿಲ್ ದೇವ್: ಟೀಮ್ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಒಟ್ಟು 687 ವಿಕೆಟ್ ಪಡೆದಿದ್ದಾರೆ.
5 ಝಹೀರ್ ಖಾನ್: ಟೀಮ್ ಇಂಡಿಯಾದ ಮಾಜಿ ಎಡಗೈ ವೇಗಿ ಝಹೀರ್ ಖಾನ್ ಒಟ್ಟು 610 ವಿಕೆಟ್ ಕಬಳಿಸಿ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.