ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rachin Ravindra: ಭರ್ಜರಿ ಶತಕ ಸಿಡಿಸಿ ಮಿಂಚಿದ ಕನ್ನಡಿಗ ರಾಚಿನ್ ರವೀಂದ್ರ!

Twitter
Facebook
LinkedIn
WhatsApp
Rachin Ravindra: ಭರ್ಜರಿ ಶತಕ ಸಿಡಿಸಿ ಮಿಂಚಿದ ಕನ್ನಡಿಗ ರಾಚಿನ್ ರವೀಂದ್ರ!

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 27ನೇ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡದ ಯುವ ಎಡಗೈ ದಾಂಡಿಗ ರಚಿನ್ ರವೀಂದ್ರ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

 

ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ರನ್ ಕಲೆಹಾಕುತ್ತಾ ಸಾಗಿದ ರಚಿನ್ ರವೀಂದ್ರ ಅರ್ಧಶತಕದ ಬಳಿಕ ಬಿರುಸಿನ ಆಟಕ್ಕೆ ಒತ್ತು ನೀಡಿದರು. ಪರಿಣಾಮ ಕೇವಲ 77 ಎಸೆತಗಳಲ್ಲಿ ಭರ್ಜರಿ ಶತಕ ಪೂರೈಸಿದರು.

 

ಈ ಸೆಂಚುರಿಯೊಂದಿಗೆ ಏಕದಿನ ವಿಶ್ವಕಪ್​ನಲ್ಲಿ 2 ಶತಕ ಬಾರಿಸಿದ 2ನೇ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ರಚಿನ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಇಂತಹದೊಂದು ವಿಶೇಷ ದಾಖಲೆ ನಿರ್ಮಿಸಿದ್ದರು.

 

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 23ನೇ ವಯಸ್ಸಿನಲ್ಲಿ 2 ವಿಶ್ವಕಪ್ ಶತಕಗಳನ್ನು ಬಾರಿಸಿ ದಾಖಲೆ ಬರೆದಿದ್ದರು. ಇದೀಗ ರಚಿನ್ ರವೀಂದ್ರ ಕೂಡ 23ನೇ ವಯಸ್ಸಿನಲ್ಲೇ ಈ ಸಾಧನೆಯನ್ನು ಸರಿಗಟ್ಟಿರುವುದು ವಿಶೇಷ.

ಇದಲ್ಲದೆ ಏಕದಿನ ವಿಶ್ವಕಪ್​ ಆವೃತ್ತಿಯಲ್ಲಿ 2 ಶತಕ ಬಾರಿಸಿದ ನ್ಯೂಝಿಲೆಂಡ್​ನ ನಾಲ್ಕನೇ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ರಚಿನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಗ್ಲೆನ್ ಟರ್ನರ್, ಮಾರ್ಟಿನ್ ಗಪ್ಟಿಲ್ ಹಾಗೂ ಕೇನ್ ವಿಲಿಯಮ್ಸನ್ ಮಾತ್ರ ಈ ಸಾಧನೆ ಮಾಡಿದ್ದರು.

 
 

ಇದೀಗ ಈ ಬಾರಿಯ ವಿಶ್ವಕಪ್​ನಲ್ಲಿ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸಿಡಿಸುವ ಮೂಲಕ ರಚಿನ್ ರವೀಂದ್ರ ಈ ಸಾಧನೆ ಮಾಡಿದ ನ್ಯೂಝಿಲೆಂಡ್​ನ ಮೊದಲ ಎಡಗೈ ದಾಂಡಿಗ ಹಾಗೂ 4ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.ಇನ್ನು ಈ ಪಂದ್ಯದಲ್ಲಿ 89 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ 5 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 116 ರನ್ ಬಾರಿಸಿ ಔಟಾದರು.

 
 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ