ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!

Twitter
Facebook
LinkedIn
WhatsApp
ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!

ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಇಂದು ನಗರದಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಹಲವು ವಿಚಾರಳನ್ನು ಹಂಚಿಕೊಂಡರು. ಮೊದಲಿಗೆ ಅವರು ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ ಮತ್ತು ಭದ್ರಾವತಿ-ಮೂರು ಪ್ರದೇಶಗಳಲ್ಲಿ ವಾಸವಾಗಿರುವ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ (guarantee scheme beneficiaries) ಒಂದು ಸಮಾವೇಶ ನಡೆಸುವ ಬಗ್ಗೆ ಹೇಳಿದರು. 

ಅದಕ್ಕಿಂತ ಮುಖ್ಯವಾಗಿ ನಾಳೆಯಿಂದ ರಾಜ್ಯದಲ್ಲಿರುವ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಮೂರು ದಿನ ಪೌಷ್ಠಿಕಾಂಶಭರಿತ ರಾಗಿಮಾಲ್ಟ್ ಅನ್ನು (Ragi malt) ಹಾಲಿನೊಂದಿಗೆ ಬೆರೆಸಿ ನೀಡುವ ಯೋಜನೆ ಆರಂಭವಾಗಲಿದೆ ಮತ್ತು ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಲ್ಲಿ ಲಾಂಚ್ ಮಾಡಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದರು. 

ಸುಮಾರು 59 ಲಕ್ಷ ಶಾಲಾ ಮಕ್ಕಳಿಗೆ ಈಗಾಗಲೇ ವಾರದಲ್ಲಿ 5 ದಿನ ನೀಡುತ್ತಿರುವ ಹಾಲು ಮತ್ತು ವಾರದಲ್ಲಿ ಎರಡು ದಿನ ಮೊಟ್ಟೆ ಸೇರಿದಂತೆ ಇನ್ನು ಮುಂದೆ ವಾರಲ್ಲಿ 3 ದಿನ ರಾಗಿಮಾಲ್ಟ್ ಕೂಡ ನೀಡಲಾಗುವುದು ಎಂದು ಸಚಿವ ಹೇಳಿದರು. ರಾಗಿಮಾಲ್ಟ್ ಸ್ವಾದಿಷ್ಟವಾಗಿರುವ ಜೊತೆಗೆ ಮಕ್ಕಳನ್ನು ದೈಹಿಕವಾಗಿ ಸದೃಢವಾಗಿಸಲಿದೆ ಎಂದು ಅವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ