ರಾಗಿಣಿ ನಟನೆಯ ‘ಶೀಲ’ ಚಿತ್ರದ ಫಸ್ಟ್ ಲುಕ್ ರಿಲೀಸ್
ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ (Ragini Dwivedi) ‘ಶೀಲ’ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ (Malayalam) ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷಾ ಚಿತ್ರಗಳಲ್ಲಿ ರಾಗಿಣಿ ಮಿಂಚುತ್ತಿದ್ದಾರೆ. ಅಲ್ಲದೇ, ತಮಿಳು ಸಿನಿಮಾವೊಂದರಲ್ಲೂ ಅವರು ನಟಿಸಿದ್ದಾರೆ.
ಶೀಲ (Sheela) ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣುಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ. ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ (First Look) ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.
ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ (Balu Narayan) ನಿರ್ದೇಶಿಸಿದ್ದಾರೆ. ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.