ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!

Twitter
Facebook
LinkedIn
WhatsApp
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!

2023ರ ವಿಶ್ವಕಪ್ (ICC World Cup 2023) ಸೋಲಿನ ನಂತರ ಟೀಂ ಇಂಡಿಯಾದ ಮುಖ್ಯ ಕೋಚ್ ಬದಲಾಗುತ್ತಾರೋ, ಇಲ್ಲವೋ ಎಂಬ ಪ್ರಶ್ನೆಗೆ ಬಿಸಿಸಿಐ (BCCI) ಇದೀಗ ಉತ್ತರ ನೀಡಿದೆ. ಬುಧವಾರ ಮಹತ್ವದ ಘೋಷಣೆ ಮಾಡಿರುವ ಬಿಸಿಸಿಐ, ರಾಹುಲ್ ದ್ರಾವಿಡ್ (Rahul Dravid) ಅವರನ್ನು ಮುಖ್ಯ ಕೋಚ್ ಆಗಿ ಮರು ಆಯ್ಕೆ ಮಾಡಿದೆ. ವಾಸ್ತವವಾಗಿ ವಿಶ್ವಕಪ್ ಫೈನಲ್ ನಂತರ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಂಡಿತ್ತು. ಅಂದಿನಿಂದ ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಅವರನ್ನು ಟೀಂ ಇಂಡಿಯಾದ (Team India) ಮುಖ್ಯ ಕೋಚ್ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಸೃಷ್ಟಿಯಾಗಿದ್ದವು. ಆದರೆ ಆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ, ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ಮುಂದುವರೆಸಿದೆ. ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದಿರುವ ಗುರು ದ್ರಾವಿಡ್, ತಂಡದೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದ್ದಾರೆ.

ವದಂತಿಗಳು ಏನಿದ್ದವು?

ವಾಸ್ತವವಾಗಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯ ಮುಗಿಯುವುದರೊಂದಿಗೆ ಟೀಂ ಇಂಡಿಯಾದಲ್ಲಿ ರಾಹುಲ್ ದ್ರಾವಿಡ್ ಅವರ ಮುಖ್ಯ ಕೋಚ್ ಹುದ್ದೆಯ ಅವಧಿಯೂ ಮುಕ್ತಾಯಗೊಂಡಿತ್ತು. ಆ ಬಳಿಕ ಬಂದ ವರದಿಗಳ ಪ್ರಕಾರ, ರಾಹುಲ್ ದ್ರಾವಿಡ್ ಮತ್ತೊಮ್ಮೆ ಈ ಜವಬ್ದಾರಿಯನ್ನು ವಹಿಸಿಕೊಳ್ಳಲು ನಿರಾಕರಿಸಿದ್ದಾರೆ. ಅಲ್ಲದೆ ತಂಡದೊಂದಿಗಿನ ಅಧಿಕ ಪ್ರಯಾಣ ರಾಹುಲ್ ಅವರ ಈ ನಿರ್ಧಾರಕ್ಕೆ ಕಾರಣ ಎಂದು ವರದಿಯಾಗಿತ್ತು. ಹಾಗೆಯೇ ಕುಟುಂಬಕ್ಕೆ ಹೆಚ್ಚು ಸಮಯ ನೀಡುವ ಉದ್ದೇಶದಿಂದ ರಾಹುಲ್ ಮತ್ತೊಮ್ಮೆ ಮುಖ್ಯ ಕೋಚ್ ಹುದ್ದೆಗೇರುವುದನ್ನು ನಿರಾಕರಿಸಿದ್ದು, ಅವರ ಜಾಗಕ್ಕೆ ಮತ್ತೊಬ್ಬ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಬರಲಿದ್ದಾರೆ ಎಂದು ವರದಿಯಾಗಿತ್ತು.

ಸಂತಸ ವ್ಯಕ್ತಪಡಿಸಿದ ರಾಹುಲ್

ಇನ್ನು ಮತ್ತೊಮ್ಮೆ ಈ ಅವಕಾಶ ಸಿಕ್ಕಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ರಾಹುಲ್ ದ್ರಾವಿಡ್, ‘ತನ್ನ ಮೇಲೆ ನಂಬಿಕೆ ಇಟ್ಟಿರುವ ಬಿಸಿಸಿಐಗೆ ಕೃತಜ್ಞತೆ ಸಲ್ಲಿಸುತ್ತೇನೆ. ಬಿಸಿಸಿಐ ಯಾವಾಗಲೂ ತನ್ನ ಯೋಜನೆ ಮತ್ತು ದೂರದೃಷ್ಟಿಯನ್ನು ಬೆಂಬಲಿಸುತ್ತದೆ. ತನಗಾಗಿ ಸಾಕಷ್ಟು ತ್ಯಾಗ ಮಾಡಿದ ಕುಟುಂಬಕ್ಕೆ ಧನ್ಯವಾದ ಹೇಳಲು ಇಷ್ಟಪಡುತ್ತೇನೆ. ವಿಶ್ವಕಪ್ ಬಳಿಕ ನನ್ನ ಮುಂದೆ ಹೊಸ ಸವಾಲುಗಳಿದ್ದು, ಅವುಗಳನ್ನು ಎದುರಿಸಲು ಸಿದ್ಧ’ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ದ್ರಾವಿಡ್‌ಗೆ ಮತ್ತೆ ಮುಖ್ಯ ಕೋಚ್‌ನ ಜವಾಬ್ದಾರಿ ಏಕೆ?

ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ್ ಶಾ ಕೂಡ ರಾಹುಲ್ ದ್ರಾವಿಡ್ ಮತ್ತೊಮ್ಮೆ ಈ ಹುದ್ದೆಯನ್ನು ಅಲಂಕರಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ದ್ರಾವಿಡ್ ಅವರ ಅವಧಿ ಅದ್ಭುತವಾಗಿದೆ ಎಂದಿರುವ ಜಯ್ ಶಾ, ‘ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಮತ್ತು ಇದರಲ್ಲಿ ರಾಹುಲ್ ದ್ರಾವಿಡ್ ಪಾತ್ರ ದೊಡ್ಡದಾಗಿದೆ. ಈ ಪ್ರದರ್ಶನದಿಂದಾಗಿ ರಾಹುಲ್ ದ್ರಾವಿಡ್ ಮತ್ತೆ ಮುಖ್ಯ ಕೋಚ್ ಆಗಲು ಅರ್ಹರಾಗಿದ್ದಾರೆ ಎಂದಿದ್ದಾರೆ. ಹಾಗೆಯೇ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಕೂಡ ರಾಹುಲ್ ದ್ರಾವಿಡ್‌ಗೆ ಎಲ್ಲಾ ರೀತಿಯ ಸಹಾಯವನ್ನು ನೀಡಲಾಗುವುದು ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’