Rain Alert: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; 3 ದಿನ ಭಾರಿ ಮಳೆಯ ಮುನ್ಸೂಚನೆ.!
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 4 ದಿನ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಕೊಡಗು,ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ, ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಮುಲ್ಕಿ, ಭಾಗಮಂಡಲ, ಮಾಣಿ, ಮಂಗಳೂರು ವಿಮಾನ ನಿಲ್ದಾಣ, ಕುಂದಾಪುರ, ಅಂಕೋಲಾ, ಗೋಕರ್ಣ, ದಕ್ಷಿಣ ಕನ್ನಡ ಜಿಲ್ಲೆ, ಸಿದ್ದಾಪುರ, ಆಗುಂಬೆ, ನಾಪೊಕ್ಲು, ಕುಮಟಾ, ಗೇರುಸೊಪ್ಪ, ಹೊನ್ನಾವರ, ಮೂರ್ನಾಡು, ಕೋಟ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.
ಉಡುಪಿ, ಕಮ್ಮರಡಿ, ಲಿಂಗನಮಕ್ಕಿ, ಬೆಳ್ತಂಗಡಿ, ಸೋಮವಾರಪೇಟೆ, ತಾಳಗುಪ್ಪ, ಶೃಂಗೇರಿ, ಯಲ್ಲಾಪುರ, ಲೋಂಡಾ, ಹುಂಚದಕಟ್ಟೆ, ಕಳಸ, ಜಯಪುರ, ಬನವಾಸಿ, ಹುಣಸೂರು, ಹಾಸನ, ಎಚ್ಡಿ ಕೋಟೆ, ಸರಗೂರು, ಕುಶಾಲನಗರ, ಅರಕಲಗೂಡು, ಗುಂಡ್ಲುಪೇಟೆಯಲ್ಲಿ ಕೂಡ ಭಾರಿ ಮಳೆಯಾಗಿದೆ.
ಉಡುಪಿ, ಕೊಡಗಿನಲ್ಲೂ ಮಳೆ ಹೆಚ್ಚಾಗಿದೆ, ಉಡುಪಿ ಜಿಲ್ಲೆಯ ತಗ್ಗು ಪ್ರದೇಶದಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಕೃತಕ ನೆರೆ ಕಂಡುಬಂದಿದೆ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪ್ರತಿ ವರ್ಷವೂ ಇಲ್ಲಿ ನೆರೆಹಾವಳಿ ಉಂಟಾಗುತ್ತಿದೆ.
ಇನ್ನು ಕೊಡಗಿನಲ್ಲಿ ಮಳೆ ಹೆಚ್ಚಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಇಂದು ದಕ್ಷಿಣ ಒಳನಾಡಿ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.
ಮೀನುಗಾರರಿಗೆ ಎಚ್ಚರಿಕೆ ಗಾಳಿಯುಗಂಟೆಗೆ 35 ಕಿ.ಮೀ ಇಂದ 45 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಕನ್ನಡ ಕರಾವಳಿಯಲ್ಲಿ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳು ಏಳುವ ಸಾಧ್ಯತೆ ಇದೆ ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಮಳೆಯಾಗುವ ಸಾಧ್ಯತೆ ಇದೆ. ಹೊನ್ನಾವರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿನ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.