Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!
ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು ಗಾಳಿಯು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 31 ಮತ್ತು 22 ಡಿ.ಸೆ ಇರಲಿದೆ.
ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಹಗುರವಾದ ಮಳೆಯಾಗಲಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ಇದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ.
ಆರೆಂಜ್, ಯೆಲ್ಲೋ ಅಲರ್ಟ್
ಚಿತ್ರದುರ್ಗ, ಹಾಸನ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯೊಂದಿಗೆ ಗುಡುಗು, ಬಿರುಗಾಳಿಯು ಗಂಟೆಗೆ 30-40 ಕಿ.ಮೀ ಬೀಸಲಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.