ಕರ್ನಾಟಕದ ಕೆಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ (Karnataka Rains) ಮಳೆಯಾಗುತ್ತಿದ್ದು, ಮುಂಗಾರು ಪ್ರಾರಂಭವಾಗುವ ಸುಳಿವು ನೀಡಿದೆ. ಹೀಗಾಗಿ, ಭಾರಿ ಮಳೆ ಹಾಗೂ ಮಳೆ (Rain) ಸಂಬಂಧಿತ ಹಾನಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾದೇಶಿಕ ಆಯುಕ್ತರು, ಡಿಸಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಕಂದಾಯ ಇಲಾಖೆ (Revenue Department) ಪತ್ರ ಬರೆದಿದೆ. ತಗ್ಗು ಪ್ರದೇಶಗಳನ್ನು ಗುರುತಿಸಲು, ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯ ಸಭೆಗಳನ್ನು ನಡೆಸಲು ಮತ್ತು ಅಣೆಕಟ್ಟುಗಳ ಸಮೀಪವಿರುವ ನಿವಾಸಿಗಳನ್ನು ತ್ವರಿತವಾಗಿ ಎಚ್ಚರಿಸಲು ಸಿದ್ಧತೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!
Twitter
Facebook
LinkedIn
WhatsApp
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಈ ವರ್ಷ ದೇಶಾದ್ಯಂತ ಶೇ 104 ರಷ್ಟು ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದಲ್ಲಿಯೂ ಹೆಚ್ಚಿನ ಮಳೆಯಾಗಲಿದೆ. ಹೀಗಾಗಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಕಂದಾಯ ಇಲಾಖೆಯ ಅಧೀನದಲ್ಲಿರುವ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹೊರಡಿಸಿದ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆಗಾಗಿ ಇತರ ಇಲಾಖೆಗಳೊಂದಿಗೆ ಸಭೆ ನಡೆಸಿ ಜವಾಬ್ದಾರಿಗಳನ್ನು ಹಂಚುವ ಅಗತ್ಯವೂ ಇದೆ. ತಗ್ಗು ಪ್ರದೇಶಗಳನ್ನು ಗುರುತಿಸಲು ಅಧಿಕಾರಿಗಳು ಡಿಸಿಗಳಿಗೆ ಸೂಚನೆ ನೀಡಿದ್ದು, ಇದಕ್ಕಾಗಿ ನಗರಾಭಿವೃದ್ಧಿ ಇಲಾಖೆ/ಆರ್‌ಡಿಪಿಆರ್ ಮತ್ತು ಪಿಡಬ್ಲ್ಯೂಡಿಯೊಂದಿಗೆ ಸಮನ್ವಯತೆ ಸಾಧಿಸುವ ಅಗತ್ಯವಿದೆ.
ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಹಾಗೂ ದನಕರುಗಳಿಗೆ ಆಹಾರಕ್ಕಾಗಿ ಗೋಶಾಲೆ ಆರಂಭಿಸಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮೈಸೂರು-ಊಟಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತರು ಬಾಳೆ ಮತ್ತಿತರ ತೋಟಗಾರಿಕಾ ಬೆಳೆಗಳನ್ನು ಕಳೆದುಕೊಂಡಿದ್ದು, ರೈತರನ್ನು ಅಪಾರ ನಷ್ಟದಿಂದ ಪಾರು ಮಾಡಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.
ಚಿಕ್ಕಮಗಳೂರಿನಲ್ಲಿ ಭಾರಿ ಮಳೆ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿದಿದೆ. ಭಾರಿ ಗುಡುಗು ಮಿಂಚು ಸಹಿತ ಗಾಳಿಯೊಂದಿಗೆ ಸುಮಾರು ಅರ್ಧ ಗಂಟೆ ಮಳೆ ಸುರಿದಿದೆ.