ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Rain Alert: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಲಘು ಮಳೆ ನಿರೀಕ್ಷೆ.!

Twitter
Facebook
LinkedIn
WhatsApp
Rain Alert: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಲಘು ಮಳೆ ನಿರೀಕ್ಷೆ.!

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಶುಷ್ಕ ವಾತಾವರಣ (Dry Weather) ಇದ್ದರೂ ಕೆಲವೆಡೆ ಬಿಸಿಲ ತಾಪಮಾನವು (Karnataka Weather Forecast) ಮುಂದುವರಿಯಲಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ದಕ್ಷಿಣ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮಳೆಯ ಸಿಂಚನವಾಗಲಿದೆ. ಮಿಕ್ಕ ಎಲ್ಲ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆ

ದಕ್ಷಿಣ ಒಳನಾಡಿನ ಮೈಸೂರು ಮತ್ತು ತುಮಕೂರಿನಲ್ಲಿ ಕೆಲವೆಡೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರುವ ಸಾಧ್ಯತೆಯಿದೆ.

ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಬೀದರ್, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ ಮತ್ತು ಬಾಗಲಕೋಟೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಳಿದೆಡೆ ಒಣ ಹವೆ ಮುಂದುವರಿಯಲಿದೆ.

ಕರಾವಳಿ-ಮಲೆನಾಡಲ್ಲಿ ಗುಡುಗು ಮಳೆ

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲೂ ಮಳೆಗೆ ಗುಡುಗು ಸಾಥ್‌ ನೀಡಲಿದೆ.

ಬೆಂಗಳೂರಲ್ಲಿ ಒಣಹವೆ

ಬೆಂಗಳೂರು ಸುತ್ತಮುತ್ತ ಸೋಮವಾರದಂದು ಒಣಹವೆ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು 35 ಹಾಗೂ 21ರ ಆಸುಪಾಸಿನಲ್ಲಿರಲಿದೆ. ಸದ್ಯಕ್ಕೆ ಬೆಂಗಳೂರಿಗೆ ಯಾವುದೇ ಮಳೆ ಸೂಚನೆ ಇಲ್ಲ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 34 ಡಿ.ಸೆ – 22 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 36 ಡಿ.ಸೆ – 22 ಡಿ.ಸೆ
ಗದಗ: 37 ಡಿ.ಸೆ – 22 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಕಲಬುರಗಿ: 40 ಡಿ.ಸೆ – 25 ಡಿ.ಸೆ
ಬೆಳಗಾವಿ: 36 ಡಿ.ಸೆ – 21 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ