Rain Alert: ರಾಜ್ಯದ ಹಲವೆಡೆ ಮುಂದಿನ ವಾರ ಮಳೆ ನಿರೀಕ್ಷೆ; ಕರಾವಳಿಯಲ್ಲಿ ಹೆಚ್ಚಿದ ತಾಪಮಾನ.!

Rain Alert: ಕರ್ನಾಟಕದೆಲ್ಲೆಡೆ ಸೆಕೆ(Heat) ವಿಪರೀತ ಹೆಚ್ಚಾಗುತ್ತಿದೆ. ಮಾರ್ಚ್ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಾಫಿನಾಡಲ್ಲಿ ವರ್ಷದ ಮೊದಲ ಮಳೆ ; ಕಾದ ಕಾವಲಿಯಂತಾದ ನೆಲಕ್ಕೆ ತಂಪು ಸುರಿದ ವರುಣ..!
ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಮಲೆನಾಡಿನ ಕೆಲವು ಭಾಗಗಳಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಚಿಕ್ಕಮಗಳೂರಿನ ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.ತಾಲೂಕಿನ ಮುತ್ತೋಡಿ ತಪ್ಪಲು, ಕೊಳಗಾಮೆ, ಮೇಲಿನ ಹುಲುವತ್ತಿ ಭಾಗಗಳು ಸೇರಿದಂತೆ ಹಲವು ಹಳ್ಳಿಗಳಲ್ಲಿ ಮಳೆಯಾಗಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಕಾಫಿ ಬೆಳೆಗಾರರು ಹಾಗೂ ಅಡಿಕೆ, ಕಾಳು ಮೆಣಸು ಉಳಿಕೊಳ್ಳಲು ಪರದಾಡುತ್ತಿದ್ದ ರೈತರು, ಮಳೆ ಕಂಡು ಸಂತಸಕ್ಕೀಡಾಗಿದ್ದಾರೆ
ಇದು ಈ ಬಾರಿ ಸುರಿದ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆಯೇ ದೊಡ್ಡ ಪ್ರಮಾಣದಲ್ಲಿ ಸುರಿದಿದೆ. ಒಂದೇ ಗಂಟೆಗೆ ಸುಮಾರು 3.84 ಸೆಂ.ಮೀ ಮಳೆಯಾಗಿದೆ