ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ರಾಜ್ಯದ ಹಲವೆಡೆ ಮುಂದಿನ ವಾರ ಮಳೆ ನಿರೀಕ್ಷೆ; ಕರಾವಳಿಯಲ್ಲಿ ಹೆಚ್ಚಿದ ತಾಪಮಾನ.!

Twitter
Facebook
LinkedIn
WhatsApp
Rain Alert: ರಾಜ್ಯದ ಹಲವೆಡೆ ಮುಂದಿನ ವಾರ ಮಳೆ ನಿರೀಕ್ಷೆ; ಕರಾವಳಿಯಲ್ಲಿ ಹೆಚ್ಚಿದ ತಾಪಮಾನ.!

Rain Alert: ಕರ್ನಾಟಕದೆಲ್ಲೆಡೆ ಸೆಕೆ(Heat) ವಿಪರೀತ ಹೆಚ್ಚಾಗುತ್ತಿದೆ. ಮಾರ್ಚ್ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಾಫಿನಾಡಲ್ಲಿ ವರ್ಷದ ಮೊದಲ ಮಳೆ ; ಕಾದ ಕಾವಲಿಯಂತಾದ ನೆಲಕ್ಕೆ ತಂಪು ಸುರಿದ ವರುಣ..!

ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಮಲೆನಾಡಿನ ಕೆಲವು ಭಾಗಗಳಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಚಿಕ್ಕಮಗಳೂರಿನ  ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.ತಾಲೂಕಿನ ಮುತ್ತೋಡಿ ತಪ್ಪಲು, ಕೊಳಗಾಮೆ, ಮೇಲಿನ ಹುಲುವತ್ತಿ ಭಾಗಗಳು ಸೇರಿದಂತೆ ಹಲವು ಹಳ್ಳಿಗಳಲ್ಲಿ ಮಳೆಯಾಗಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಕಾಫಿ ಬೆಳೆಗಾರರು ಹಾಗೂ ಅಡಿಕೆ, ಕಾಳು ಮೆಣಸು ಉಳಿಕೊಳ್ಳಲು ಪರದಾಡುತ್ತಿದ್ದ ರೈತರು, ಮಳೆ ಕಂಡು ಸಂತಸಕ್ಕೀಡಾಗಿದ್ದಾರೆ

ಇದು ಈ ಬಾರಿ ಸುರಿದ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆಯೇ ದೊಡ್ಡ ಪ್ರಮಾಣದಲ್ಲಿ ಸುರಿದಿದೆ. ಒಂದೇ ಗಂಟೆಗೆ ಸುಮಾರು 3.84 ಸೆಂ.ಮೀ ಮಳೆಯಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ