ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Rain Alert: ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಮೂರು ದಿನಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ; ಐಎಂಡಿ

Twitter
Facebook
LinkedIn
WhatsApp
Rain Alert: ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶದಲ್ಲಿ ಮೂರು ದಿನಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ; ಐಎಂಡಿ

ಬೆಂಗಳೂರು: 2-3 ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಬೀದರ್ ಮತ್ತು ಕಲಬುರಗಿಯಲ್ಲಿ ಭಾನುವಾರ ತುಂತುರು ಮಳೆಯಾಗಿದ್ದು, ಇನ್ನೆರಡು ಮೂರು ದಿನಗಳಲ್ಲಿ ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾತನಾಡಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದೆ. ಅಲ್ಲದೆ, ತಮಿಳುನಾಡಿನ ಬಳಿ ಕಾಣಿಸಿಕೊಂಡಿರುವ ಟ್ರಫ್ (ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾಗುವ ಪರಿಣಾಮ) ಪರಿಣಾಮ ಕರ್ನಾಟಕದ ಮೇಲೂ ಬೀರಲಿದೆ ಎಂದು ಹೇಳಿದ್ದಾರೆ.

ಮಾರ್ಚ್ 20 ಅಥವಾ 21 ರಿಂದ, ಎರಡರಿಂದ ಮೂರು ದಿನಗಳವರೆಗೆ ತುಂತುರು ಮಳೆ ಇರಲಿದೆ. ಆದರೆ, ಈ ಮಳೆ ಅಣೆಕಟ್ಟುಗಳನ್ನು ತುಂಬಲು ಅಥವಾ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುವುದಿಲ್ಲ. ಅಲ್ಪಸ್ವಲ್ಪ ಮಳೆ ಸ್ವಲ್ಪ ಸಮಯದವರೆಗೆ ತಾಪಮಾನವನ್ನು ತಗ್ಗಿಸಲು ಸಹಾಯ ಮಾಡುತ್ತದೆ. ಜನರು ಈ ನೀರನ್ನು ಮಳೆನೀರು ಕೊಯ್ಲು ಮಾಡಬೇಕು. ಇದರಿಂದ ಕುಡಿಯುವ ನೀರಿನ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಏಪ್ರಿಲ್‌ನಲ್ಲಿ 36-40 ಮಿ.ಮೀ ಮತ್ತು ಮೇನಲ್ಲಿ 86 ಮಿ.ಮೀ ಮಳೆಯಾಗುವ ನಿರೀಕ್ಷೆಯಿದ್ದು, ಈ ವರ್ಷ ಉತ್ತಮ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈನಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದೇವೆ ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ.

KSNDMC ಮಾಹಿತಿಯ ಪ್ರಕಾರ, ರಾಜ್ಯದ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ರಾಜ್ಯ ಸರಕಾರ ಈಗಾಗಲೇ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ಏತನ್ಮಧ್ಯೆ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟದಲ್ಲಿ ಕುಸಿತ ಕಾಣುತ್ತಲೇ ಇದೆ. 123 ಪ್ರಮುಖ ಜಲಾಶಯಗಳಲ್ಲಿ ಒಟ್ಟು 895.62 ಟಿಎಂಸಿ ಅಡಿ ಸಾಮರ್ಥ್ಯದ ಪೈಕಿ 284 ಟಿಎಂಸಿ ಅಡಿಯಡಿಗೆ ತಲುಪಿದೆ. ಕಳೆದ ವರ್ಷ ಇದೇ ಸಮಯದ್ಲಿ ಜಲಾಯಶಗಳ ಮಟ್ಟ 386 ಟಿಎಂಸಿ ಅಡಿಯಷ್ಟಿತ್ತು

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist