ಮಂಗಳವಾರ, ಮೇ 21, 2024
ಟಿ-20 ವಿಶ್ವಕಪ್ ಟೂರ್ನಿಗೆ ಜೆರ್ಸಿ ಬಿಡುಗಡೆ ಮಾಡಿದ ಐರ್ಲೆಂಡ್ ತಂಡ..!-ಒಂದೇ ಕುಟುಂಬದ ಮೂವರು ನಿಗೂಢವಾಗಿ ನಾಪತ್ತೆ..!-ಹಾಜಬ್ಬರ ಶಾಲೆಯಲ್ಲಿ ದುರಂತ; ಶಾಲೆಯ ತಡೆಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು..!-ಕಂಗನಾ ರಣಾವತ್ ಮೇಲೆ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಘೋಷಣೆ ; ದೂರು ದಾಖಲು.!-ಪಪ್ಪಾಯ ಹಣ್ಣಿನಲ್ಲಿರುವ ನಿಮಗೆ ತಿಳಿದಿರದ ಕೆಲವು ಆರೋಗ್ಯಕಾರಿ ಸಂಗತಿಗಳು; ತಪ್ಪದೇ ಓದಿ-ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ಕರಾವಳಿಯಲ್ಲಿ ಏಪ್ರಿಲ್ 13ರಿಂದ 3 ದಿನಗಳ ಕಾಲ ಮಳೆ ಮುನ್ಸೂಚನೆ.!

Twitter
Facebook
LinkedIn
WhatsApp
Rain Alert: ಕರಾವಳಿಯಲ್ಲಿ ಏಪ್ರಿಲ್ 13ರಿಂದ 3 ದಿನಗಳ ಕಾಲ ಮಳೆ ಮುನ್ಸೂಚನೆ.!

ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನುಳಿದ ಕಡೆ ಏಪ್ರಿಲ್ 13ರಿಂದ ಮಳೆ ಶುರುವಾಗಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಏಪ್ರಿಲ್ 13ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

ಮುಂದಿನ 4 ದಿನ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ. ಕಲಬುರಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಎಚ್​ಎಎಲ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆಯಲ್ಲಿ 40.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 40.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ 37.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ