ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!

Twitter
Facebook
LinkedIn
WhatsApp
Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!

ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೇ07ರಿಂದ 12ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಗದಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಇಂದು ಮಳೆಯಾಗಲಿದೆ.

ಬೀದರ್​, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು ಚಿತ್ರದುರ್ಗದಲ್ಲಿ ಮೇ 8ರ ಬಳಿಕ ಮಳೆಯಾಗಲಿದೆ. ಭಾನುವಾರ ಚಾಮರಾಜನಗರದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಅಥವಾ ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 42.0 ಡಿಗ್ರಿ ಸೆಲ್ಸಿಯಸ್​ ಗರಿಷಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ವಿಜಯಪುರದಲ್ಲಿ 42.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 43.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ