ಮಂಗಳವಾರ, ಏಪ್ರಿಲ್ 30, 2024
Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 17 ರವರೆಗೆ ಮಳೆ ನಿರೀಕ್ಷೆ..!

Twitter
Facebook
LinkedIn
WhatsApp
Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 17 ರವರೆಗೆ ಮಳೆ ನಿರೀಕ್ಷೆ..!

ಯುಗಾದಿಯಂದು ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ.

ಇನ್ನುಳಿದಂತೆ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಾಗಲಕೋಟೆಯಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 35.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಏಪ್ರಿಲ್​ 12,13 ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ