ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಮುನ್ಸೂಚನೆ; ರಾಜ್ಯದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Twitter
Facebook
LinkedIn
WhatsApp
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕು ಸಾಧ್ಯತೆಗಳ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈ ಕುರಿತು ಹವಾಮಾನ ಇಲಾಖೆ ಇಂದಿನ ವರದಿಯನ್ನು ಪ್ರಕಟಿಸಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ.
ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿಂದ ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಸೆಪ್ಟೆಂಬರ್ 13ರ ಬಳಿಕ ಮುಂಗಾರು ಚುರುಕು ಸಾಧ್ಯತೆಯಿದೆ. ರಾಜ್ಯ ರಾಜಧಾನಿಯಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದ್ದು, ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಂದಿನ ವರದಿಯಲ್ಲಿ ಉಲ್ಲೇಖಿಸಿದೆ.