ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಳೆ ಬರದೇ ಒಣಗಿ ಹೋದ ಬೆಳೆ ; ಜಮೀನಿನಲ್ಲೆ ಅನ್ನಾದಾತ ಆತ್ಮಹತ್ಯೆ!

Twitter
Facebook
LinkedIn
WhatsApp
ಮಳೆ ಬರದೇ ಒಣಗಿ ಹೋದ ಬೆಳೆ ; ಜಮೀನಿನಲ್ಲೆ ಅನ್ನಾದಾತ ಆತ್ಮಹತ್ಯೆ!

ಚಿಕ್ಕಮಗಳೂರು, ಆ 31 : ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶಗೊಂಡಿರುವ ಹಿನ್ನೆಲೆ ರೈತನೊಬ್ಬ ತನ್ನ ಹೊಲದಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ನಡೆದಿದೆ.

ಸತೀಶ್ ( 49) ನೇಣಿಗೆ ಶರಣಾದ ರೈತ.

ರೈತ ಸತೀಶ್ ಅವರು ಮಳೆ ನಿರೀಕ್ಷೆಯಲ್ಲಿದ್ದು, ಸಾಲ ಮಾಡಿ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಮಳೆ ಬಾರದ ಹಿನ್ನೆಲೆ ಉಂಟಾದ ಬರಕ್ಕೆ ಈರುಳ್ಳಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿದ್ದರಿಂದ ಮನನೊಂದ ಜಮೀನಿನಲ್ಲೇ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಸ್ಥಳಕ್ಕೆ ಅಜ್ಜಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ

ಬೆಂಗಳೂರು: ಮೆಜೆಸ್ಟಿಕ್‌ (Bengaluru) ರೈಲ್ವೆ ನಿಲ್ದಾಣದಲ್ಲಿ ಉದ್ಯಾನ್ ಎಕ್ಸ್‌ಪ್ರೆಸ್ ರೈಲಿನಲ್ಲಿ (Train) ಬೆಂಕಿ (Fire) ಕಾಣಿಸಿಕೊಂಡಿದ್ದ ಪ್ರಕರಣಕ್ಕೆ ಇನ್ನೂ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ ಈ ಬೆಂಕಿ ಅವಘಡ ಹಾಗೂ ಮಧುರೈನಲ್ಲಿ ಸಂಭವಿಸಿದ ಅನಾಹುತದ ಹಿನ್ನಲೆಯಲ್ಲಿ ತನಿಖೆ ಚುರುಕುಗೊಳಿಸಲಾಗಿದೆ.

ಘಟನೆ ನಡೆದು 10 ದಿನ ಕಳೆದಿದೆ. ಆದರೆ ಘಟನೆಗೆ ಇನ್ನೂ ನಿಖರ ಕಾರಣ ಸಿಗದಿರುವುದು ಹಲವು ಅನುಮಾನಕ್ಕೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಪ್ರಕರಣದ ಹಿಂದೆ ಕಿಡಿಗೇಡಿಗಳ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.

ಈ ಪ್ರಕರಣವನ್ನು ಆರ್‌ಪಿಎಫ್ ಡಿಜಿ ಮನೋಜ್ ಯಾದವ್ ತನಿಖೆ ನಡೆಸುತ್ತಿದ್ದಾರೆ. ಬೆಂಕಿ ಅವಘಡವನ್ನು ಗಂಭೀರವಾಗಿ ಪರಿಗಣಿಸಿರುವ ಅವರು ಎರಡು ದಿನಗಳ ಹಿಂದೆ ರೈಲ್ವೇ ಕಚೇರಿಗೆ ಧಿಡೀರ್ ಭೇಟಿಕೊಟ್ಟಿದ್ದರು. ಈ ವೇಳೆ ನಗರ ಪೊಲೀಸ್‌ (Police) ಹಾಗೂ ಆರ್‌ಪಿಎಫ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದರು.

ಅವಘಡ ಸಂಭವಿಸಿದ್ದ ಭೋಗಿಯಲ್ಲಿ ಪ್ರಯಾಣ ಮಾಡಿದ ಪ್ರಯಾಣಿಕರು ಯಾರು? ಭೋಗಿಯಲ್ಲಿ ಟೆಕ್ನಿಕಲ್ ಸಮಸ್ಯೆ ಆಗಿತ್ತಾ? ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅಲ್ಲದೇ ಈ ವೇಳೆ ಮುಂಬೈನಿಂದ‌ (Mumbai) ಬಂದಿದ್ದ ರೈಲಿನಲ್ಲಿ ಮುಂಬೈ ಸಿಬ್ಬಂದಿಯೇ ಕಾರ್ಯ ನಿರ್ವಹಿಸುತ್ತಿದ್ದರು. ರೈಲು ಬಂದ ಒಂದು ಗಂಟೆಯ ನಂತರ ಬೆಂಕಿ ಅವಘಡ ಸಂಭವಿಸಿತ್ತು. ಇದೇ ವಿಚಾರವಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಲ್ಲಾ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದೆ.

ಸಿಸಿಟಿವಿಯಲ್ಲಿ ಪತ್ತೆಯಾದ ಅಂಶಗಳ ಆಧಾರದ ಮೇಲೂ ತನಿಖೆ ನಡೆಸಲಾಗುತ್ತಿದೆ. ರೈಲ್ವೆ ವಿಭಾಗೀಯ ಅಧಿಕಾರಿಗಳಿಂದ ಆಂತರಿಕ ತನಿಖೆ ಸಹ ನಡೆಯುತ್ತಿದೆ. ಸದ್ಯ ಎರಡು ತನಿಖಾ ತಂಡಗಳು ವಿಧಿವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯುತ್ತಿವೆ. ಬಳಿಕ ನಿಖರ ಕಾರಣ ಬೆಳಕಿಗೆ ಬರಲಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ