ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Rain: ಬೆಂಗಳೂರಿನಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ..!

Twitter
Facebook
LinkedIn
WhatsApp
Rain: ಬೆಂಗಳೂರಿನಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ..!

Rain: ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ, ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ನವೆಂಬರ್ 12ರವರೆಗೂ ಮಳೆ ಮುಂದುವರೆಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು, ಉತ್ತರ ಕನ್ನಡ, ಗದಗ, ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತೊಂಡೇಭಾವಿ, ಕೊನೇಹಳ್ಳಿ, ಹೆಬ್ಬೂರು, ಕೃಷ್ಣರಾಜಪೇಟೆ, ಹಾವೇರಿ, ರಾಮನಗರ, ರೋಣ, ಸರಗೂರು, ಬೆಂಗಳೂರು ನಗರ, ದೊಡ್ಡಬಳ್ಳಾಪುರ, ಸಾಲಿಗ್ರಾಮ, ಯುಗಟಿ, ಶಿಗ್ಗಾಂವ್, ಕೆಂಭಾವಿ, ದೇವನಹಳ್ಳಿ, ಮಾಗಡಿ, ಬೆಂಗಳೂರು ಕೆಐಎಎಲ್​ ವಿಮಾನ ನಿಲ್ದಾಣ, ಕಡೂರು, ಕೃಷ್ಣರಾಜಸಾಗರ, ಮದ್ದೂರು, ಕೊಟ್ಟೂರು, ಪಾವಗಡ, ಚಿಕ್ಕಬಳ್ಳಾಪುರ, ತುಮಕೂರು, ಹಿರಿಯೂರು,ಚಿಂತಾಮಣಿ, ಉತ್ತರಹಳ್ಳಿ, ಗೌರಿಬಿದನೂರು, ಉತ್ತರಹಳ್ಳಿ, ಚನ್ನಪಟ್ಟಣ, ಶ್ರೀರಂಗಪಟ್ಟಣ, ಗೌರಿಬಿದನೂರು, ಕುಕನೂರು, ಹಡಗಲಿ, ಯಲ್ಲಾಪುರ, ಸವಣೂರು, ತಿಪಟೂರು, ಸಿರಾ, ಮಧುಗಿರಿ, ಗುಬ್ಬಿ, ಹಡಗಲಿ, ಬಂಡೀಪುರ, ಚಾಮರಾಜನಗರ, ಹೊಸಪೇಟೆ, ಭದ್ರಾವತಿ, ಗೇರುಸೊಪ್ಪ, ಸಿದ್ದಾಪುರ, ಗಂಗಾವತಿ, ಮುನಿರಾಬಾದ್, ಗದಗ, ಬಾಗಲಕೋಟೆ, ಹನುಮನಮಟ್ಟಿ, ಕುಣಿಗಲ್, ಹರಪನಹಳ್ಳಿ, ನರಸೀಪುರ, ಕುಣಿಗಲ್, ಎನ್​ಆರ್​ಪುರ, ಕೋಣನೂರು, ಸಂತೆಬೆನ್ನೂರಿನಲ್ಲಿ ಮಳೆಯಾಗಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಾಗೂ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ದಾವಣಗೆರೆಯಲ್ಲಿ 19.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ