Rain Weather: ಮೋಡ ಕವಿದ ವಾತಾವರಣದ ಜೊತೆ ಏರುತ್ತಿದೆ ಬಿಸಿಲ ಝಳ; ಇಲ್ಲಿದೆ ಇಂದಿನ ಹವಾಮಾನ ವರದಿ.!
ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿನ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಮಳೆಯಾಗುವ (Karnataka Weather Forecast) ನಿರೀಕ್ಷೆ ಇದೆ.
ದಕ್ಷಿನ ಒಳನಾಡಿನ ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇನ್ನೂ ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಚದುರಿದಂತೆ ಹಗುರವಾದ ಮಳೆ ಸಂಭವ ಇದೆ. ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ ಮತ್ತು ವಿಜಯಪುರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆಯ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಅಲ್ಲಿಲ್ಲ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬೆಂಗಳೂರಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಗರಿಷ್ಠ 35 ಮತ್ತು ಕನಿಷ್ಠ ತಾಪಮಾನವು 21ರ ಆಸುಪಾಸಿನಲ್ಲಿರಲಿದೆ.
ಬಾಗಲಕೋಟೆಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಾಮರಾಜನಗರದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.