ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Weather: ಮಲೆನಾಡಿನಲ್ಲಿ ತಂಪೆರೆದ ಮಳೆರಾಯ; ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಸುಸ್ತಾದ ಜನ.!

Twitter
Facebook
LinkedIn
WhatsApp
Rain Weather: ಮಲೆನಾಡಿನಲ್ಲಿ ತಂಪೆರೆದ ಮಳೆರಾಯ; ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಸುಸ್ತಾದ ಜನ.!
ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಮಲೆನಾಡಿನ ಕೆಲವು ಭಾಗಗಳಿಗೆ ಮಳೆರಾಯ (Rain) ತಂಪೆರೆದಿದ್ದಾನೆ. ಚಿಕ್ಕಮಗಳೂರಿನ (Chikkamagaluru) ಹಲವು ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ.ತಾಲೂಕಿನ ಮುತ್ತೋಡಿ ತಪ್ಪಲು, ಕೊಳಗಾಮೆ, ಮೇಲಿನ ಹುಲುವತ್ತಿ ಭಾಗಗಳು ಸೇರಿದಂತೆ ಹಲವು ಹಳ್ಳಿಗಳಲ್ಲಿ ಮಳೆಯಾಗಿದೆ. ಮಳೆಗಾಗಿ ಆಕಾಶ ನೋಡುತ್ತಿದ್ದ ಕಾಫಿ ಬೆಳೆಗಾರರು ಹಾಗೂ ಅಡಿಕೆ, ಕಾಳು ಮೆಣಸು ಉಳಿಕೊಳ್ಳಲು ಪರದಾಡುತ್ತಿದ್ದ ರೈತರು, ಮಳೆ ಕಂಡು ಸಂತಸಕ್ಕೀಡಾಗಿದ್ದಾರೆ. 
chikkamagalur

ಇದು ಈ ಬಾರಿ ಸುರಿದ ವರ್ಷದ ಮೊದಲ ಮಳೆಯಾಗಿದ್ದು, ಮೊದಲ ಮಳೆಯೇ ದೊಡ್ಡ ಪ್ರಮಾಣದಲ್ಲಿ ಸುರಿದಿದೆ. ಒಂದೇ ಗಂಟೆಗೆ ಸುಮಾರು 3.84 ಸೆಂ.ಮೀ ಮಳೆಯಾಗಿದೆ.

ಭಾರಿ ಮಳೆ ನಿರೀಕ್ಷೆಯಲ್ಲಿ ಕರ್ನಾಟಕದ ಜನ: ಹವಾಮಾನ ಪರಿಸ್ಥಿತಿ ಹೇಗಿದೆ?

ಮುಂಗಾರು ಮಳೆ ಕೈಕೊಟ್ಟ ಕಾರಣಕ್ಕೆ ಕರ್ನಾಟಕ 2023ರಲ್ಲಿ ಭಾರಿ ಸಮಸ್ಯೆಗೆ ಸಿಲುಕಿತ್ತು. ಹೀಗಾಗಿಯೇ 2024ರ ಬೇಸಿಗೆ ಆರಂಭಕ್ಕೂ ಮೊದಲೇ ದೊಡ್ಡ ತಲೆನೋವು ಶುರುವಾಗಿದ್ದು, ಕುಡಿಯುವ ನೀರು ಒದಗಿಸಲು ಸರ್ಕಾರ ಕೂಡ ಪರದಾಡುತ್ತಿದೆ. ಈ ಸಮಯದಲ್ಲೇ ನಮ್ಮ ರಾಜ್ಯದ ಹಲವು ಪ್ರದೇಶದಲ್ಲಿ ಟ್ಯಾಂಕರ್ ಮಾಫಿಯಾ ಶುರುವಾಗಿದೆ, ಎಂಬ ಆರೋಪವೂ ಕೇಳಿಬರುತ್ತಿದೆ. ಇಷ್ಟೆಲ್ಲಾ ಸಮಸ್ಯೆ ನಡುವೆ ಒಂದೇ ಒಂದು ದೊಡ್ಡ ಮಳೆ ಬಿದ್ದರೆ ಸಾಕು, ಎಲ್ಲಾ ಸಮಸ್ಯೆ ಸಂಪೂರ್ಣ ಬಗೆಹರಿಯಲಿದೆ ಎಂಬ ನಿರೀಕ್ಷೆ ಇದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ,  ಬೆಂಗಳೂರು ನಗರ,  ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರವು ಸೇರಿ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಭಾರಿ ಬಿಸಿಲು ಮುಂದುವರಿಯುವ ಸಾಧ್ಯತೆ ಇದೆ.

ಕಳೆದ ವರ್ಷ ಮಳೆ ಕೈಕೊಟ್ಟಿತ್ತು. ಆದ್ರೆ ಈಗ ಮತ್ತೆ ಮಳೆ ಶುರುವಾಗುತ್ತಿದೆ ದೇಶದ ಹಲವು ರಾಜ್ಯದಲ್ಲಿ ಮಳೆ ಹಾಗೂ ಆಲಿಕಲ್ಲು ಬೀಳಲಿದೆ ಎನ್ನಲಾಗಿದೆ. ಇದರ ಜೊತೆಗೆ ಕರ್ನಾಟಕದಲ್ಲಿ, ಕನ್ನಡಿಗರ ನೆಲವೂ ಮಳೆ ಕಾರಣ ಒದ್ದೆಯಾಗಲಿದೆ ಉತ್ತಮ ಮಳೆ ಬೀಳುತ್ತೆ ಅಂತ ರೈತರು ಕಾಯುತ್ತಿದ್ದಾರೆ. ಹಾಗೇ ಗ್ರಾಮೀಣ ಭಾಗದಲ್ಲಿ ಇಂತಹ ಸಮಯದಲ್ಲಿ ಮಳೆ ಬಿದ್ರೆ ಕುಡಿಯುವ ನೀರಿಗೆ ಎದುರಾದ ಸಮಸ್ಯೆ ಸರಿಹೋಗಲಿದೆ. ಉತ್ತರ ಕರ್ನಾಟಕ & ಮೈಸೂರು ಕರ್ನಾಟಕ ಭಾಗದ ಜನರು ಇದೀಗ, ಭಾರಿ ಮಳೆ ಕೊರತೆ ಕಾರಣ ನಲುಗಿ ಹೋಗಿದ್ದಾರೆ. ಹಳ್ಳಿಗಳಲ್ಲಿ ಇದೀಗ, ನೀರು ಪಡೆಯುವುದೇ ದೊಡ್ಡ ಸಾಹಸ ಆಗಿದೆ. ಹೀಗಾಗಿ ಪ್ರತಿಯೊಬ್ಬರು ಮಳೆ ಬರಲಿ ಅಂತ ಪ್ರಾರ್ಥನೆ ಮಾಡುತ್ತಿದ್ದಾರೆ ಆದರೆ ವರುಣ ದೇವ ಯಾವಾಗ ಕರುಣೆ ತೋರಿಸುತ್ತಾನೋ ಗೊತ್ತಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ