ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಳೆ ಚುರುಕು ; ಮಳೆ ಜೊತೆ ಗಾಳಿ ಬೀಸುವ ಸಾಧ್ಯತೆ!
ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ. ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವರುಣ ಅಬ್ಬರಿಸಲಿದ್ದಾನಂತೆ.
ರಾಜ್ಯಾದ್ಯಂತ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆಯಂತೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ರಾಯಚೂರುನಲ್ಲಿ ಮಳೆಯಾಗಲಿದೆ .
ಈಗಾಗಲೇ ಭಾರೀ ಪ್ರಾಕೃತಿಕ ವಿಕೋಪಕ್ಕೆ ನಲುಗಿರುವ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂಬರುವ ವಾರದಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಆಗಸ್ಟ್ 21 ಮತ್ತು 22 ರಂದು ಹಿಮಾಚಲ ಪ್ರದೇಶದ 10 ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆ ಪ್ರದೇಶಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಅಲ್ಲದೇ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ನದಾತರು ಮಳೆರಾಯನನ್ನು ಕಾಯುತ್ತಿದ್ದಾರೆ. ಮಳೆ ಬಂದ್ರೆ ಸಾಕು ಎಂದು ಹೇಳ್ತಾ ಇದ್ದಾರೆ.
ಕರ್ನಾಟಕದಾದ್ಯಂತ ಮುಂಗಾರು ಮತ್ತೆ ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅಂದರೆ ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಘಲಿದೆ.
ಬೆಂಗಳೂರಿನ ಕೆಲವೆಡೆ ನಿನ್ನೆ ಹಗುರ ಮಳೆಯಾಗಿದೆ, ಇಂದು ಕೂಡ ಮೋಡಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.