ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!

Twitter
Facebook
LinkedIn
WhatsApp
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!

ರಾಜೀವ್​ ಗಾಂಧಿ(Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಸಂತನ್​(Santhan) ಬುಧವಾರ ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.

ನವೆಂಬರ್ 11, 2022 ರಂದು, ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಆರು ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮರುದಿನವೇ ನಳಿನಿ, ಶ್ರೀಹರನ್, ಸಂತನ್, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ 32 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು.

ಇಲ್ಲಿ ಒಂದು ಸಮಸ್ಯೆ ಇತ್ತು. ನಳಿನಿ ಮತ್ತು ರವಿಚಂದ್ರನ್ ಅವರನ್ನು ಬಿಡುಗಡೆ ಮಾಡಲಾಯಿತು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಲು ಅವಕಾಶ ನೀಡಲಾಯಿತು ಆದರೆ ಉಳಿದ ನಾಲ್ವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದಲ್ಲಿ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು. ನಾಲ್ವರೂ ಶ್ರೀಲಂಕಾದ ಪ್ರಜೆಗಳಾಗಿದ್ದರಿಂದ ಹೀಗೆ ಮಾಡಲಾಗಿತ್ತು.

ಸಂತನ್ ಅವರು ತಿರುಚ್ಚಿ ಜೈಲಿನ ವಿಶೇಷ ಶಿಬಿರದಲ್ಲಿರುವ ತಮ್ಮ ಸೆಲ್ ನಿಂದ ಬಹಿರಂಗ ಪತ್ರ ಬರೆದಿದ್ದರು. ತ್ರದ ಮೂಲಕ, ಅವರು ತಮ್ಮ ದೇಶಕ್ಕೆ ಮರಳಲು ಧ್ವನಿ ಎತ್ತುವಂತೆ ವಿಶ್ವದಾದ್ಯಂತದ ತಮಿಳರಿಗೆ ಮನವಿ ಮಾಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ