ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯಸಭೆ ಚುನಾವಣೆ: ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್ ಗೆ 3, ಕಮಲಕ್ಕೆ 1 ಗೆಲುವು: ಹೆಬ್ಬಾರ್ ಗೈರು..!

Twitter
Facebook
LinkedIn
WhatsApp
ರಾಜ್ಯಸಭೆ ಚುನಾವಣೆ: ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್ ಗೆ 3, ಕಮಲಕ್ಕೆ 1 ಗೆಲುವು: ಹೆಬ್ಬಾರ್ ಗೈರು..!

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ (Karnataka Rajya Sabha Election Result 2024)  ಹೊರಬಿದ್ದಿದೆ. ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ  ಅವರು ಸೋಲು ಕಂಡಿದ್ದಾರೆ. ಈ ಮೂಲಕ ಕುಮಾರಸ್ವಾಮಿ, ಬಿಜೆಪಿ ನಾಯಕರ ಲೆಕ್ಕಾಚಾರ ತಲೆಕೆಳಗಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಗೆ ಮತ್ತೊಂದು ಸೋಲಾದಂತಾಗಿದೆ.

ಚಲಾವಣೆಗೊಂಡ ಎಲ್ಲಾ ಅಂದರೆ 222 ಮತಗಳು ಸಹ ಸಿಂಧುವಾಗಿದ್ದು,  ಕಾಂಗ್ರೆಸ್​ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್​​ನ 19 ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ 16 ಮತಗಳು ಮಾತ್ರ ಬಿದ್ದಿವೆ. ಈ ಮೂಲಕ ಕುಪೇಂದ್ರ ರೆಡ್ಡಿ ಸೋಲನುಭವಿಸಿದ್ದಾರೆ.

ಬೆಳಗ್ಗೆ 9 ಗಂಟೆಗೆ ಮತದಾನ ಆರಂಭಗೊಂಡಿತ್ತು. ಕಾಂಗ್ರೆಸ್ 134 ಸದಸ್ಯರು ಬಂದು ಮತದಾನ ಮಾಡಿದರು. ಜೊತೆಗೆ ನಾಲ್ವರು ಪಕ್ಷೇತರ ಶಾಸಕರು ಕೂಡಾ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದಾರೆ. ಇನ್ನು ಬಿಜೆಪಿ ಅಸಮಾಧಾನಿತ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮತ್ತೋರ್ವ ಶಾಸಕ ಶಿವರಾಂ ಹೆಬ್ಬಾರ್ ಮತದಾನ ಮಾಡಲು ಆಗಮಿಸಲಿಲ್ಲ. ಇಬ್ಬರು ಶಾಸಕರ ನಡೆ ಬಿಜೆಪಿಗೆ ಮುಜುಗರ ಉಂಟು ಮಾಡಿದೆ.

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅಜಯ್ ಮಕನ್ ಗೆ 47, ಸೈಯದ್ ನಾಸೆರ್ ಹುಸೇನ್ ಗೆ 47 ಹಾಗೂ ಜಿ.ಸಿ ಚಂದ್ರಶೇಖರ್ ಗೆ 45 ಮತಗಳು ಬಿದ್ದಿವೆ. ಇನ್ನು ಬಿಜೆಪಿ ಅಭ್ಯರ್ಥಿ ನಾರಾಯಣ ಸಾ ಭಾಂಡಗೆಗೆ 48 ಮತಗಳು ಬಿದ್ದಿದ್ದು ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ 35 ಮತಗಳು ಸಿಕ್ಕಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ