ಬೆಳ್ತಂಗಡಿ ಮೂಲದ ಡಾ.ಪ್ರಶಾಂತ್ ಶೆಟ್ಟಿಗೆ ರಾಜ್ಯೋತ್ಸವ ಪ್ರಶಸ್ತಿ

ಕರಾವಳಿಯ ಜಿಲ್ಲೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಆರು ಸಾಧಕರು, ಒಂದು ಸಂಸ್ಥೆಗೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಸಮಾಜ ಸೇವೆಯಲ್ಲಿ ಚಾರ್ಮಾಡಿ ಹಸನಬ್ಬ, ಯಕ್ಷಗಾನದಲ್ಲಿ ಲೀಲಾವತಿ ಬೈಪಡಿತ್ತಾಯ, ಆರ್ಗೋಡು ಮೋಹನ್ದಾಸ್ ಶೆಣೈ, ವೈದ್ಯಕೀಯ ಕ್ಶೇತ್ರದಲ್ಲಿ ಡಾ.ಪ್ರಶಾಂತ್ ಶೆಟ್ಟಿ, ಸಂಕೀರ್ಣ ಕ್ಶೇತ್ರದಲ್ಲಿ ಹಾಜಿ ಅಬ್ದುಲ್ಲಾ ಪರ್ಕಳ, ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್ಮಟ್ಟು ಪ್ರಶಸ್ತಿ ಲಭಿಸಿದೆ.
ಬೆಳ್ಳಂಗಡಿ, ಉಜಿರೆ ಎಸ್.ಡಿ.ಎಂ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಪ್ರಿನ್ಸಿಪಾಲ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರಶಾಂತ್ ಶೆಟ್ಟಿ ಅವರು ರಾಜ್ಯೋತ್ಸವ ಪ್ರಶಸ್ತಿ ವಿಜೇತರಾಗಿದ್ದಾರೆ.
ಡಾ.ಪ್ರಶಾಂತ್ ಶೆಟ್ಟಿ ಅವರು ಮೂಲತಃ ಕಾರ್ಕಳ ತಾಲೂಕಿನ ಹೆಬ್ರಿಯವರು ಇಲ್ಲಿನ ಮಾಬ್ರಿಯಲ್ಲಿ ಜನಿಸಿದ ಅವರು ಅಲ್ಲಿಯೇ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿ 1994ರಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆಯಲ್ಲಿ ಪ್ರಥಮ ಬ್ಯಾಚಿನಲ್ಲಿ ಬಿಎನ್ ವೈಎಸ್ ಪದವಿಯನ್ನು ಮುಗಿಸಿದ್ದಾರೆ.
ಶಿಕ್ಷಣ ಮುಗಿಸಿದ ಸಂಸ್ಥೆಯಲ್ಲಿ ತನ್ನ ವೃತ್ತಿ ಜೀವನವನ್ನು ಉಪನ್ಯಾಸಕರಾಗಿ ಹಾಗೂ ವೈದ್ಯಾಧಿಕಾರಿಯಾಗಿ ಪ್ರಾರಂಭಿಸಿ ದರು. 2004 ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಸ್.ವಿ.ವೈಎಎಸ್ಐ ಯೋಗ ವಿಶ್ವವಿದ್ಯಾನಿಲಯದಲ್ಲಿ ಯೋಗ ವಿಜ್ಞಾನದಲ್ಲಿ ಸ್ನಾತಕೋತ್ತರ ಪರದಿಯನ್ನು ವಸಿಷ್ಠ ಅವಾರ್ಡ್’ ಪುರಸ್ಕಾರದೊಂದಿಗೆ ಮುಗಿಸಿದರು. ಇದೇ ವಿಶ್ವವಿದ್ಯಾನಿಲಯದಲ್ಲಿ 2004ರಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಷಯದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದರು.
ಭಾರತ ಸರಕಾರದ ಆಯುಷ್ ಮಂತ್ರಾಲಯದ ಟಾಸ್ಕ್ ಫೋರ್ಸ್ ಸದಸ್ಯರಾಗಿ ಹಾಗೂ ಆಯುಷ್ ಮಂತ್ರಾಲಯದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಅಭಿವೃದ್ಧಿ ಮಂಡಳಿಯ ಸದಸ್ಯರಾಗಿ ಹಾಗೂ ಕೇಂದ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಂಡಳಿಯಲ್ಲಿ ಸದಸ್ಯತ್ವವನ್ನು ಪಡೆದಿರುತ್ತಾರೆ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿರುವುದು ಇವರ ಸೇವೆಗೆ ಸಂದ ಗೌರವ.
ಪ್ರಸ್ತುತ ಇವರು ಕರ್ನಾಟಕ ಸರಕಾರದ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ ಸಲಹಾ ಮಂಡಳಿಯ ಸದಸ್ಯರಾಗಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಅಕಾಡಮಿಕ್ ಕೌನ್ಸಿಲ್ ಸದಸ್ಯರಾಗಿ ಹಾಗೂ ಸ್ನಾತಕೋತ್ತರ ಸಲಹಾ ಮಂಡಳಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
68ನೇ ಕನ್ನಡ ರಾಜ್ಯೋತ್ಸವ: ನಾಡದೇವತೆ ಭುವನೇಶ್ವರಿಗೆ ಪುಷ್ಪಾರ್ಚನೆ, ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
https://x.com/ANI/status/1719563367827009969?s=20
ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.