ಸೋಮವಾರ, ಏಪ್ರಿಲ್ 29, 2024
ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಮೇಶ್ವರಂ ಕೆಫೇ ಸ್ಫೋಟ ಪ್ರಕರಣ; ಬಿಜೆಪಿ ಮುಖಂಡ ವಶಕ್ಕೆ.!

Twitter
Facebook
LinkedIn
WhatsApp
ರಾಮೇಶ್ವರಂ ಕೆಫೇ ಸ್ಫೋಟ ಪ್ರಕರಣ; ಬಿಜೆಪಿ ಮುಖಂಡ ವಶಕ್ಕೆ.! Rameswaram Cafe Blast Case; BJP leader arrested.

ಬೆಂಗಳೂರು: ಶಿವಮೊಗ್ಗ(Shivamogga)  ಜಿಲ್ಲೆ ತೀರ್ಥಹಳ್ಳಿಯಲ್ಲಿ ಸಾಯಿಪ್ರಸಾದ್ ಎನ್ನುವಾತನನ್ನು ಇಂದು (ಏಪ್ರಿಲ್ 05) ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಬೈಲ್ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿದ್ದ NIA ಅಧಿಕಾರಿಗಳು, ಇದೀಗ ತೀರ್ಥಹಳ್ಳಿ ಬಿಜೆಪಿ ಘಟಕದ ಕಾರ್ಯದರ್ಶಿಯಾಗಿರುವ  ಸಾಯಿಪ್ರಸಾದ್ ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.

ಸಾಕ್ಷಿಯನ್ನಾಗಿ ಪರಿಗಣನೆ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ  ಸಾಯಿ ಪ್ರಸಾದ್‌  ಅವರನ್ನು ಎನ್‌ಐಎ ಸಾಕ್ಷಿಯನ್ನಾಗಿ ಪರಿಗಣಿಸಿದೆ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಮುಜಾಮಿಲ್‌ಗೆ ಸಾಯಿ ಪ್ರಸಾದ್‌ ಮೊಬೈಲ್‌ ಮಾರಾಟ ಮಾಡಿದ್ದರು. ಮುಜಾಮಿಲ್ ಷರೀಫ್ ಪ್ರಕರಣದ ಮತ್ತೊಬ್ಬ ಆರೋಪಿ ಮುಸಾವೀರ್‌ಗೆ ಮೊಬೈಲ್ ಸಿಮ್ ಕೊಟ್ಟಿದ್ದ. ಮುಸಾವೀರ್ ಬಳಸಿದ್ದು ಇದೇ ಮೊಬೈಲ್ ಎಂಬ ಅನುಮಾನದ ಮೇಲೆ ಸೆಕೆಂಡ್‌ ಹ್ಯಾಂಡ್‌ ಮೊಬೈಲ್‌ ಮಾರಾಟ ಮಾಡುತ್ತಿದ್ದ ಸಾಯಿ ಪ್ರಸಾದ್‌ ಅವರನ್ನು ವಿಚಾರಣೆ ನಡೆಸಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದರು. ಘಟನೆ ಬೆಂಗಳೂರು ನಗರವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಹಲವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದು, ಮಾಹಿತಿಯನ್ನು ಕಲೆಹಾಕಿದೆ. ಅಲ್ಲದೇ ಓರ್ವನನ್ನು ಬಂಧಿಸಿದೆ. ಆದ್ರೆ, ಘಟನೆ ನಡೆದು ತಿಂಗಳು ಕಳೆದರೂ ಸಹ ಬಾಂಬರ್​ನ ಸುಳಿವು ಮಾತ್ರ ಇನ್ನೂ ಸಿಕ್ಕಿಲ್ಲ.

ತೀರ್ಥಹಳ್ಳಿ ಬಿಜೆಪಿ ಮುಖಂಡನನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಇತ್ತ ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದೆ. ಈ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಮುಖಂಡ ಸಾಯಿಪ್ರಸಾದ್‌ನನ್ನು ರಾಷ್ಟ್ರೀಯ ತನಿಖಾ ದಳದವರು ವಶಕ್ಕೆ ಪಡೆದಿದ್ದಾರೆ. ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು NIA ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ